ಅಳ್ನಾವರ: ‘ಪಂಚಾಯಿತಿ ಮಟ್ಟದ ಅರಿವು ಕೇಂದ್ರಗಳಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿವೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ ಹೇಳಿದರು.

ಸಮೀಪದ ಕಡಬಗಟ್ಟಿ ಗ್ರಾಮದ ಗ್ರಾಮೀಣ ಗ್ರಂಥಾಲಯದ ಅರಿವು ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಅವರು ಮಾತನಾಡಿ, ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಇಂತಹ ಕೇಂದ್ರಗಳು ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕಳೆದ ಒಂದೂವರೆ ತಿಂಗಳಿಂದ ಮಕ್ಕಳಿಗಾಗಿ ವಿವಿಧ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಆಟ, ಚಿತ್ರಕಲೆ, ಶುದ್ದ ಬರಹ, ಕಥೆ ಹೇಳುವುದು, ಪುಸ್ತಕ ಓದುವುದು ಮುಂತಾದ ಚಟುವಟಿಕೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಜೊತೆಗೆ ಜನರಿಗೆ ಗ್ರಂಥಾಲಯಗಳ ಮಹತ್ವ ತಿಳಿಸಲಾಗುತ್ತಿದೆ ಎಂದು ಕಡಬಗಟ್ಟಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಡಾ.ಸುನಿಲ್ ಬನ್ನೀಗೋಳ ಹೇಳಿದರು.

ಪ್ರತಿ ದಿನ ಬೆಳಿಗ್ಗೆ 9 ರಿಂದ 12ರವರೆಗೆ ನಡೆದ ಈ ಶಿಬಿರದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದರು. ಕಡಬಗಟ್ಟಿ ಗ್ರಾಮ ಪಂಚಾಯಿತಿ ಪಿಡಿಒ ಆನಂದ ಪಾಟೀಲ, ಸಂಜಯ ಮೌಳಿ, ಗುರುರಾಜ ಸಬನೀಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-24-108818084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.