ಆಲೂರು: ಅದೃಷ್ಟ, ಗ್ರಹಚಾರ ಅಥವಾ ಹಣೆಬರಹ ಎಂಬ ಮೌಢ್ಯ ನಂಬಬೇಡಿ. ಶಿಕ್ಷಣದ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹಾಸನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಿ. ಕೆ. ಮಂಜಯ್ಯ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಡಾ.ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಾವ ದೇಶದಲ್ಲಿ ಬೆಳಿಗ್ಗೆ ದೇವಾಲಯದ ಗಂಟೆಗಳು ಬಾರಿಸುತ್ತವೊ ಆ ದೇಶ ಮುಂದುವರಿಯುವುದಿಲ್ಲ. ಯಾವ ದೇಶದಲ್ಲಿ ಬೆಳಿಗ್ಗೆ ಶಾಲೆ ಗಂಟೆಗಳು ಮೊಳಗುತ್ತವೆಯೊ, ಆ ದೇಶ ಸರ್ವತೋಮುಖವಾಗಿ ಮುಂದುವರಿಯುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಅಂಬೇಡ್ಕರ್ ತಮ್ಮ ಬದುಕಿನಲ್ಲಿ ಎಂದೂ ಸುಖವನ್ನು ಅನುಭವಿಸಿಲ್ಲ. ಇಡೀ ಪ್ರಪಂಚದಲ್ಲಿ 29 ಪದವಿಗಳನ್ನು ಪಡೆದ ಏಕೈಕ ವ್ಯಕ್ತಿ, ತಾನು ತನಗಾಗಿ ಬದುಕದೆ, ನಿಸ್ವಾರ್ಥದಿಂದ ಸಮಾಜದಲ್ಲಿ ನೊಂದವರು, ಅಸಹಾಯಕರಿಗೆ ತನ್ನ ತನು, ಮನವನ್ನು ತ್ಯಾಗ ಮಾಡಿದವರು ಅಂಬೇಡ್ಕರ್ ಎಂದರು.

ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರು ಕೇಂದ್ರ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎಂದು ಧ್ವನಿ ಎತ್ತಿದ್ದ ಮೊದಲಿಗರು. ಮೌನದಿಂದ ಎಲ್ಲವನ್ನೂ ಗೆಲ್ಲಬಹುದು ಎಂಬುದಕ್ಕೆ ಅಂಬೇಡ್ಕರ್ ಮಾದರಿಯಾಗಿದ್ದಾರೆ ಎಂದರು.

ತಹಶೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯಶರ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡ, ಪ.ಪಂ. ಮುಖ್ಯಾಧಿಕಾರಿ ಮಂಜುನಾಥ್, ಜಿ.ಪಂ. ಮಾಜಿ ಸದಸ್ಯೆ ಚಂಚಲ ಕುಮಾರಸ್ವಾಮಿ, ದಲಿತ ಮುಖಂಡರಾದ ಅರಸಯ್ಯ, ಬಸವರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹಮದ್, ಶಿಕ್ಷಕಿ ವೇದಾವತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-36-1993513164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.