ಹಂಪಾಪುರ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾವಂತರನ್ನಾಗಿ ಮಾಡಿ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕು ಎಂದು ಪುರಸಭೆ ಸದಸ್ಯ ಎಚ್.ಸಿ. ನರಸಿಂಹಮೂರ್ತಿ ಸಲಹೆ ನೀಡಿದರು.

ಹೋಬಳಿಯ ಕೋಹಳ ಗ್ರಾಮದಲ್ಲಿ ಸೋಮವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶೋಷಣೆ, ಅಸಮಾನತೆ, ಅಸ್ಪೃಶ್ಯತೆ, ಜಾತೀಯತೆ ವಿರುದ್ಧ ನಿರಂತರವಾಗಿ ಹೋರಾಡಿದ ಅಂಬೇಡ್ಕರ್ ಅವರ ಪ್ರತಿಮೆಯನ್ನು ಗ್ರಾಮದಲ್ಲಿ ಸ್ಥಾಪನೆ ಮಾಡಿರುವುದು ಸಂತಸದ ವಿಚಾರ. ಯುವಕರು ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಭಗವಾನ್ ಬುದ್ಧರ ಪಂಚಶೀಲ ತತ್ವಗಳನ್ನು ಅನುಸರಿಸಬೇಕು’ ಎಂದರು.

ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸರ್ವಜನಾಂಗದ ಹಿತರಕ್ಷಣೆಗಾಗಿ ಹೋರಾಡಿದವರು. ಇಂಥ ಮಹಾತ್ಮರನ್ನು ಒಂದು ಜಾತಿಗೆ ಸಿಮೀತಗೊಳಿಸಬಾರದು. ಅವರ ಆದರ್ಶಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಪುತ್ಥಳಿ ಅನಾವರಣಗೊಳಿಸಿದ ಶಾಸಕ ಅನಿಲ್ ಚಿಕ್ಕಮಾದು ಅವರ ಪತ್ನಿ ಸೌಮ್ಯ ಅನಿಲ್ ಚಿಕ್ಕಮಾದು, ‘ಗ್ರಾಮಸ್ಥರು ಸಹಬಾಳ್ವೆಯಿಂದ ಜೀವನ ನಡೆಸಬೇಕು. ಗ್ರಾಮದ ಸಮಸ್ಯೆಗಳಿಗೆ ಶಾಸಕರು ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿಯೂ ಸ್ಪಂದಿಸಲಿದ್ದಾರೆ’ ಎಂದು ಹೇಳಿದರು.

ಕೊಳ್ಳೇಗಾಲ ಚೈತ್ಯವನ ಬುದ್ಧವಿಹಾರದ ಸುಗತಪಾಲ ಭಂತೇಜಿ ಮಾತನಾಡಿದರು. ಜಯಂತಿ ಅಂಗವಾಗಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯ ಮೆರವಣಿಗೆ ನಡೆಯಿತು.

ಕಾಂಗ್ರೆಸ್ ಮುಖಂಡರಾದ ಜಶೀಲಾಕೋಟೆ, ಸಿದ್ದರಾಜು, ರಾಜಣ್ಣ, ಮುಖಂಡರಾದ ಮಹೇಶ್, ದೇವರಾಜಪ್ಪ, ಮಂಜುನಾಥ್, ಅಂಕಯ್ಯ, ಚಿಕ್ಕಣ್ಣ, ಕಾಳಸ್ವಾಮಿ, ಸಣ್ಣಸ್ವಾಮಿ, ಜವರಯ್ಯ, ಬಸವಣ್ಣ, ಬಸವಯ್ಯ, ಮಹದೇವಯ್ಯ, ರಂಗಸ್ವಾಮಿ, ಸಿದ್ದರಾಜು, ಸಿದ್ದರಾಜು, ಬಸವರಾಜು, ರವಿ, ಮರಿಮಂಚಯ್ಯ, ಮಾದಯ್ಯ, ಮಲ್ಲಯ್ಯ, ಚಿಕ್ಕಸಿದ್ದಯ್ಯ, ಬಸವಯ್ಯ, ಮಹದೇವಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-1662223901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.