ಕೊಲ್ಲಂ: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಸಹಯೋಗದಲ್ಲಿ ಅಮೃತ ವಿಶ್ವ ವಿದ್ಯಾಪೀಠವು ರಕ್ಷಣಾ ತಂತ್ರಜ್ಞಾನದಲ್ಲಿ ಎಂ.ಟೆಕ್ ಕೋರ್ಸ್ ಆರಂಭಿಸಿದೆ.
ಭಾರತದ ರಕ್ಷಣಾ ವಲಯದ ಕೌಶಲದ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಈ ಕೋರ್ಸ್ ರೂಪಿಸಲಾಗಿದೆ. 2021-22ರ ಶೈಕ್ಷಣಿಕ ವರ್ಷದಿಂದ ದಾಖಲಾತಿ ಆರಂಭವಾಗಿದ್ದು, ಎಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳು ಈ ಕೋರ್ಸ್ ಅನ್ನು ಆಯ್ಕೆ ಮಾಡಿಕೊಳ್ಳಬಹುದು.
‘ರಕ್ಷಣಾ ತಂತ್ರಜ್ಞಾನವು ಬಹು ಶಿಸ್ತಿನ ಕ್ಷೇತ್ರವಾಗಿದ್ದು, ಕೆಮಿಕಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಸೇರಿದಂತೆ ವಿವಿಧ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಈ ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು. ವಿವಿಧ ರಕ್ಷಣಾ ತಂತ್ರಜ್ಞಾನದಲ್ಲಿ ಅಗತ್ಯವಾದ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ಕಲ್ಪಿಸುವ ರೀತಿಯಲ್ಲಿ ಈ ಕೋರ್ಸ್ ಅನ್ನು ವಿನ್ಯಾಸಗೊಳಿಸಲಾಗಿದೆ’ ಎಂದು ಅಮೃತ ವಿಶ್ವ ವಿದ್ಯಾಪೀಠವು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.