ಆನವಟ್ಟಿ: ‘ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಮೇ 30ರಂದು ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಪಕ್ಷಾತೀತ, ಜಾತ್ಯತೀತವಾಗಿ ಆಚರಿಸಲಾಗುವುದು’ ಎಂದು ಅಂಬೇಡ್ಕರ್ ಅಭಿಮಾನಿ ಬಳಗದ ಅಧ್ಯಕ್ಷ ಸಂಜೀವ್ ನೇರಲಗಿ ತಿಳಿಸಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತ್ಯುತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರಿಕೆಟ್ ನಾಳೆ: ‘ಮೇ 26ರಂದು ಕೆಪಿಎಸ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದೆ. ಮೇ 30ರಂದು (ಶನಿವಾರ) ಪಟ್ಟಣದ ವಿಠ್ಠಲ ದೇವಸ್ಥಾನದಿಂದ ಹೆದ್ದಾರಿಯ ಮುಖ್ಯ ಬೀದಿಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು’ ಎಂದರು.

‘2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಈ ಸಮಾರಂಭವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ಬಿ.ವೈ ರಾಘವೇಂದ್ರ ಪುಷ್ಪಾರ್ಚನೆ ಮಾಡುವರು. ಸಮಾರಂಭದಲ್ಲಿ ಎಲ್ಲಾ ಸಮಾಜದ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ವಿವಿಧ ಸಂಘ- ಸಂಸ್ಥೆಗಳ ಮುಖಂಡರಾದ ಕೆ.ಮಂಜುನಾಥ, ಕೆ.ಆರ್. ರವೀಂದ್ರ, ರಾಜಶೇಖರ್, ಅರುಣ ಸಮನವಳ್ಳಿ, ನಾಗರಾಜ ಶುಂಠಿ, ಬಸವರಾಜ್ ಅಗಸನಹಳ್ಳಿ, ನಾಗರಾಜ ಹುರುಳಿಕೊಪ್ಪ, ಅಜಿತ್ ಆಟೋ, ಶ್ರೀಪಾದ, ನಾಗರಾಜ್, ಚನ್ನಬಸಪ್ಪ ಕೋಡಿಹಳ್ಳಿ, ಮುದ್ದಪ್ಪ, ದಾದಾಪೀರ್, ನಿಂಗರಾಜ್, ವಕೀಲ ಸಂಪತ್, ಶಶಾಂಕ್, ಕೃಷ್ಣಪ್ಪ ಲಕ್ಕವಳ್ಳಿ, ನವೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-42-1433993682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.