ಆನೇಕಲ್: ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಸೋಮವಾರ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆ ಬೇಸಿಗೆ ರಜೆ ಮುಗಿಸಿದ ಮಕ್ಕಳು ಕೊಂಚ ಬೇಸರದೊಂದಿಗೆ ಸೋಮವಾರ ಶಾಲೆಗಳತ್ತ ಹೆಜ್ಜೆ ಹಾಕಿದರು. ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.

ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಜಿಗಣಿಯ ಪಿಎಂಶ್ರೀ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಬರ ಮಾಡಿಕೊಳ್ಳಲಾಯಿತು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣಗಳು, ರಂಗೋಲಿ ಹಾಕಿ ಬಲೂನ್ಗಳಿಂದ ಸಿಂಗರಿಸಲಾಗಿತ್ತು. ಮೊದಲ ದಿನ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿದ್ದರಿಂದ ಮಕ್ಕಳು ಖುಷಿಪಟ್ಟರು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಶಾಲಾ ಆರಂಭೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳುನಡೆದವು.

ಬೊಮ್ಮಸಂದ್ರ ಪಿಎಂಶ್ರೀ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆಮಹೇಂದ್ರ ಹೋಮ್ಸ್ನ ಮುಖ್ಯಸ್ಥ ಬಿ.ಟಿ.ನಾಗರಾಜರೆಡ್ಡಿ ಚಾಲನೆ ನೀಡಿದರು. ಸರ್ಜಾಪುರ ಹೋಬಳಿಯ ಹಲಸಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕೇಕ್ ಕತ್ತರಿಸಿ ಮಕ್ಕಳನ್ನು ಸ್ವಾಗತಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-15-512282876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.