ಅಂಕೋಲಾ: ‘ಭಾರತ ದೇಶ ಪುರಾತನ ಪರಂಪರೆ ಹೊಂದಿದೆ. ಇಲ್ಲಿನ ಸಂಪ್ರದಾಯಗಳು ವಿಭಿನ್ನ ಮತ್ತು ವಿಶೇಷವಾಗಿದ್ದರೂ ಮೂಲದಲ್ಲಿ ನಾವೆಲ್ಲರೂ ಒಂದೇ. ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯಿಂದ ಬಂದಿದ್ದರೂ ಎಲ್ಲರೂ ಒಂದೇ ಎಂಬ ಭಾವನೆ ನಮ್ಮ ಮನದಲ್ಲಿ ಸದಾ ಜಾಗೃತವಾಗಿರಬೇಕು’ ಎಂದು ನಿವೃತ್ತ ಪ್ರಾಚಾರ್ಯೆ ಸ್ಮಿತಾ ಫಾತರಪೇಕರ್ ಹೇಳಿದರು.

ಪಟ್ಟಣದ ಕೆಎಲ್ಇ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ ಮಾತನಾಡಿ, ‘ಸಂಪ್ರದಾಯ ಎಂಬುದು ನಮ್ಮತನವನ್ನು ತೋರಿಸುತ್ತದೆ. ಅದನ್ನು ಮತ್ತೆ ಮತ್ತೆ ಜಾಗೃತಗೊಳಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಆಧುನಿಕತೆಯ ಭರದಲ್ಲಿ ಎಂದೋ ಮರೆತ ಅಡುಗೆ, ಉಡುಗೆ-ತೊಡುಗೆಗಳು ಈ ನೆಪದಲ್ಲಿ ಹೊರಬರುತ್ತಿರುವುದು ಸಂತಸದ ವಿಚಾರ. ನಮ್ಮ ತನವನ್ನು ನಾವು ಎಂದಿಗೂ ಕಳೆದುಕೊಳ್ಳಬಾರದು’ ಎಂದರು.

ಪದವಿ ಕಾಲೇಜಿನ ಪ್ರಾಚಾರ್ಯ ಅಶ್ವತ್ಥನಾರಾಯಣ ಹೆಗಡೆ ಇದ್ದರು. ವಿದ್ಯಾರ್ಥಿಗಳಾದ ಹಿಬಾ ಖಾನ್ ಸ್ವಾಗತಿಸಿದರು, ಸುಪ್ರಿಯಾ ನಾಯ್ಕ ನಿರೂಪಿಸಿದರು. ನಿರ್ಮಲಾ ಕವರಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-1266968418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.