ಅಂಕೋಲಾ: ‘ಎನ್ಎಸ್ಎಸ್ ಯುವ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯ ಮಾಡುತ್ತಿದೆ. ವಿವಿಧ ಶಿಬಿರಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಸೇವಾ ಮನೋಭಾವವನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಎಲ್ಲರೂ ಕೈಜೋಡಿಸಬೇಕು’ ಎಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಿಂಡಿಕೇಟ್ ಸದಸ್ಯ ಶಿವಾನಂದ ನಾಯಕ ಹೇಳಿದರು.

ಪಟ್ಟಣದ ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ರಾಷ್ಟ್ರೀಯ ಸೇವಾ ಯೋಜನಾ ಕೋಶದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ನಾಯಕತ್ವದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಚಾರ್ಯ ಎಸ್.ವಿ. ವಸ್ತ್ರದ ಮಾತನಾಡಿ, ‘ಮಹಾತ್ಮ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಈ ಸಂಸ್ಥೆಯನ್ನು ಭಾರತ ಸರ್ಕಾರ ಹುಟ್ಟು ಹಾಕಿದೆ. ಎನ್ಎಸ್ಎಸ್ ಮಹಾತ್ಮ ಗಾಂಧೀಜಿ ಅವರ ದೇಶ ನಿರ್ಮಾಣದ ಪರಿಕಲ್ಪನೆಯ ಫಲವಾಗಿದ್ದು, ಯುವಜನರಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶ ಹೊಂದಿದೆ’ ಎಂದರು.

ಎನ್ಎಸ್ಎಸ್ ಸಂಯೋಜನಾಧಿಕಾರಿ ಎಂ.ಬಿ. ದಳಪತಿ ಮಾತನಾಡಿ, ‘ನಾಯಕತ್ವ ಶಿಬಿರದಿಂದ ಯುವಕರಿಗೆ ಸ್ಥಳೀಯ ಸಂಸ್ಕೃತಿ ಹಾಗೂ ಐತಿಹಾಸಿಕ ಪಾರಂಪರ್ಯದ ಅರಿವು ಮೂಡಿಸಲಾಗುತ್ತಿದೆ. ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈಜೋಡಿಸಬೇಕು. ಯುವಕರಲ್ಲಿ ಸಾಮಾಜಿಕ ಸೇವಾ ಮನೋಭಾವ ಬೆಳೆಸಿ, ಸಮುದಾಯ ಸೇವೆಯ ಮೂಲಕ ವ್ಯಕ್ತಿತ್ವ ವಿಕಸನಗೊಳಿಸುವುದೇ ಎನ್ಎಸ್ಎಸ್ ನ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದರು.

ಮಾಜಿ ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ ಮಾತನಾಡಿದರು. ನಿವೃತ್ತ ಶಿಕ್ಷಕರಾದ ರಫಿಕ್ ಶೇಖ ಇದ್ದರು. ಗ್ರಂಥಪಾಲಕ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ನಂಜುಂಡ್ಯ, ಉಪನ್ಯಾಸಕಿ ಭಾವನಾ ನಾಯಕ, ಸುಲಕ್ಷಾ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-20-669460066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.