ಅಂಕೋಲಾ: ‘ಸಮಾಜದ ಒಳಿತಿಗಾಗಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಬಳಕೆ ಮಾಡಿಕೊಂಡಾಗ, ಅನುದಾನ ನೀಡಿದ ವ್ಯಕ್ತಿಗೆ ಆತ್ಮಸಂತೋಷ ದೊರೆಯುತ್ತದೆ’ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

ಪಟ್ಟಣದಲ್ಲಿ ಆರ್ಯ ಈಡಿಗ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಾಮಧಾರಿ ನೌಕರರ ಭವನದ ಎರಡನೇ ಅಂತಸ್ತಿನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

‘ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಪಡೆದ ಅನುದಾನವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ’ ಎಂದರು.

ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ನಾಯ್ಕ ಮಾತನಾಡಿ, ‘ನಾಮಧಾರಿ ನೌಕರರ ಭವನವು ಅನೇಕ ಸಾಮಾಜಿಕ ಚಟುವಟಿಕೆಗಳಿಗೆ ವೇದಿಕೆಯಾಗುತ್ತಿರುವುದು ಹೆಮ್ಮೆ ತಂದಿದೆ. ಮುಂದಿನ ದಿನಗಳಲ್ಲಿಯೂ ಸಮಾಜಪರ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಘು ಕಾಕರಮಠ ಮಾತನಾಡಿ, ‘ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಕಾರ್ಯಗಳಿಂದ ಸಂಘದ ಮೇಲಿನ ಜನರ ವಿಶ್ವಾಸ ಮತ್ತಷ್ಟು ಹೆಚ್ಚುತ್ತದೆ’ ಎಂದರು.

ಈಡಿಗ ಮಹಾಮಂಡಳಿಯ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಜಿ.ನಾಯ್ಕ, ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಮೋಹನ ನಾಯ್ಕ ಮಾತನಾಡಿದರು. ಲೇಖಕ ಕೃಷ್ಣಾ ನಾಯ್ಕ , ಅನಿಲ ನಾಯ್ಕ, ಸಮಾಜದ ನಿವೃತ್ತ ನೌಕರರಿಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-20-1674703408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.