ಅಂಕೋಲಾ: ‘ಸಾರ್ವಜನಿಕರಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ತಂಬಾಕು ಮುಕ್ತ ಸಮಾಜ ನಿರ್ಮಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕವು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ’ ಎಂದು ಪಿಎಸ್ಐ ಲಲಿತಾ ರಜಪೂತ ಹೇಳಿದರು.

ಪಟ್ಟಣದ ಕೆನರಾ ವೆಲ್ಫೇರ್ ಟ್ರಸ್ಟ್ನ ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕ ಮತ್ತು ಅಂಕೋಲಾ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಎನ್.ಸಿ.ಸಿ ಕಮಾಂಡರ್ ಜಿ.ಆರ್.ತಾಂಡೇಲ ಮಾತನಾಡಿ, ‘ಇಂದಿನ ದಿನಗಳಲ್ಲಿ ತಂಬಾಕು, ದೂಮಪಾನದಂತಹ ದುಶ್ಚಟಗಳಿಗೆ ಯುವಜನ ಬಲಿಯಾಗುತ್ತಿರುವುದು ಆತಂಕಕಾರಿ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ಮುಖ್ಯಶಿಕ್ಷಕ ಚಂದ್ರಶೇಖರ ಕಡೆಮನಿ ಮಾತನಾಡಿದರು. ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಹವಾಲ್ದಾರ್ ಪಂಡರಿನಾಥ ಮುಂಬೈಕರ, ಬಾಬು ಹರಿಕಂತ್ರ, ಮಹಾಬಲೇಶ್ವರ ನಾಯಕ ಹಾಗೂ ಎನ್.ಸಿ.ಸಿ. ಕೆಡೆಟ್ ಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-49322259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.