ನವದೆಹಲಿ: ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಯುಜಿ) ಎರಡನೇ ಆವೃತ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 12ಕ್ಕೆ ಕೊನೆಯಾಗಬೇಕಿತ್ತು. ಮೇ 21 ರಿಂದ 31ರವರೆಗೆ ಪರೀಕ್ಷೆಗಳು ನಡೆಯಲಿವೆ.
ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಯುಜಿಸಿ ಘೋಷಿಸಿತ್ತು. ಆದರೆ, 12 ನೇ ತರಗತಿಯ ಅಂಕಗಳನ್ನು ಆಧರಿಸಿಲ್ಲ.
ವಿಶ್ವವಿದ್ಯಾಲಯಗಳಲ್ಲಿ ಯುಜಿ ಪ್ರವೇಶ ಪ್ರಕ್ರಿಯೆ ಜುಲೈ ವೇಳೆಗೆ ಪೂರ್ಣಗೊಳ್ಳುತ್ತದೆ ಮತ್ತು ಹೊಸ ಶೈಕ್ಷಣಿಕ ವರ್ಷವ ಆಗಸ್ಟ್ 1 ರಿಂದ ಪ್ರಾರಂಭವಾಗಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.