ಅರಕಲಗೂಡು: ಶಿಕ್ಷಣದಿಂದ ಮಾತ್ರ ಕುಟುಂಬ, ಸಮಾಜ, ದೇಶ ಬದಲಾಗಲು ಸಾಧ್ಯ ಎಂದು ಶಾಸಕ ಎ. ಮಂಜು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ನಡೆದ ಅರಕಲಗೂಡು ವಿದ್ಯಾಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯಾ ನಂತರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉನ್ನತ ಶಿಕ್ಷಣದತ್ತ ಹೆಚ್ಚಿನ ಒಲವು ತೋರದ್ದರ ಪರಿಣಾಮ ಪ್ರಾಥಮಿಕ ಶಿಕ್ಷಣಕ್ಕೆ ಸೌಲಭ್ಯಗಳಿಲ್ಲದೆ ಸೊರಗಿತ್ತು. ಅಡಿಪಾಯ ಗಟ್ಟಿಯಾಗಿರದಿದ್ದರೆ ಮೇಲಿನ ಹಂತ ಗುಣಮಟ್ಟದಿಂದ ಕೂಡಿರುವುದಿಲ್ಲ ಎಂಬ ಅರಿವಾದ ಬಳಿಕ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಎಸ್ಎಸ್ಎಲ್ಸಿ, ಪಿಯುಸಿ ಹಂತ ವಿದ್ಯಾರ್ಥಿಗಳ ಬದುಕಿನಲ್ಲಿ ಪ್ರಮುಖ ಘಟ್ಟವಾಗಿದ್ದು ಇಲ್ಲಿ ಶ್ರಮ ವಹಿಸಿ ಕಲಿತಾಗ ಉನ್ನತ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದೆ. ತಾಲ್ಲೂಕಿಗೆ ಉತ್ತಮ ಫಲಿತಾಂಶ ಬರಲು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಪಟ್ಟ ಪರಿಶ್ರಮ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ದಾಖಲಾಗಲಿ’ ಎಂದರು.

ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಗಂಗಾಧರ್ ಮಾತನಾಡಿ, ‘ಎಸ್ಎಸ್ಎಲ್ಸಿ ಮತ್ತು ಪಿಯು ತರಗತಿಗಳಲ್ಲಿನ ಸಾಧಕ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕಳೆದು ಹೋಗುತ್ತಿದ್ದಾರೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಕೌಶಲ ಇಲ್ಲದಿದ್ದರೆ ಸಾಧನೆ ಸಾಧ್ಯವಿಲ್ಲ. ಕೇವಲ ಅಂಕಗಳಿಗಷ್ಟೆ ಗಮನ ನೀಡದೆ ನಿಮ್ಮ ಊರು, ಸಮಾಜ, ದೇಶಕ್ಕೆ ಉನ್ನತ ಕೊಡುಗೆ ನೀಡುವ ಚಿಂತನೆ ಬೆಳೆಸಿಕೊಳ್ಳುವ ಜತೆಗೆ ಕೆಲಸಕ್ಕಾಗಿ ಕೈಚಾಚದೆ ಕೆಲಸ ಕೊಡುವವರಾಗುವ ಪ್ರಯತ್ನ ನಡೆಸಿ’ ಎಂದು ಸಲಹೆ ನೀಡಿದರು.

ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾದ ಸನಾ, ಭವಿಷ್ಯ, ಲೇಖನಾ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಬಿಇಒ ಕೆ. ಪಿ. ನಾರಾಯಣ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ಉನ್ನತ ಸಾಧನೆ ಮಾಡಲು ಸಹಕರಿಸಿದ ಶಾಸಕರು, ಅಧಿಕಾರಿಗಳು, ಶಿಕ್ಷರು, ವಿದ್ಯಾರ್ಥಿಗಳಿಗೆ ಕೃತಜ್ಞತೆ ತಿಳಿಸಿದರು. ತಾಲ್ಲೂಕಿನ 59 ಪ್ರೌಢಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳು ಹಾಗೂ ಶೇ 100 ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯ ಶಿಕ್ಷಕರನ್ನು ಗೌರವಿಸಲಾಯಿತು. ತಹಶೀಲ್ದಾರ್ ಕೆ.ಸಿ.ಸೌಮ್ಯ, ಬಿಆರ್ಸಿ ಬಾಲರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ಮಕ್ಕಳ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎ.ಆರ್. ಸುಬ್ಬರಾವ್, ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಸಾಕೀಬ್ ಉರ್ ರೆಹಮಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-36-1462363753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.