ಅರಕಲಗೂಡು: ವಿದ್ಯಾರ್ಥಿಗಳು ಪಠ್ಯಪುಸ್ತಕದ ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆ ತೋರಿಸಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಆರ್. ಬಾಲಾಜಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ವೇದಿಕೆ, ಎನ್ಎಸ್ಎಸ್, ಕ್ರೀಡೆ, ಸ್ಕೌಟ್ ಮತ್ತು ಗೈಡ್ಸ್, ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ವಿವಿಧ ಚಟುವಟಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು ಇದನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕೊಣನೂರು ಬಿಎಂ ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎ.ಆರ್. ರವಿಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಿದಾಗ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಸಮಯವನ್ನು ವ್ಯರ್ಥಮಾಡದೆ ಸದುಪಯೋಗ ಪಡಿಸಿಕೊಂಡು ಶ್ರಮ ವಹಿಸಿದರೆ ಉತ್ತಮ ಸಾಧನೆ ಸಾಧ್ಯವಾಗಲಿದೆ’ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎ. ಎಲ್.ಮಂಜುನಾಥ್ ಕಳೆದ ಶೈಕ್ಷಣಿಕ ಸಾಲಿನ ಎಲ್ಲ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಸಂತಸದ ಸಂಗತಿ ಎಂದರು.

ಹೆಚ್ಚಿನ ಅಂಕಪಡೆದ ಹಾಗೂ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ವಿಜೆತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಸಮಿತಿ ಮತ್ತು ರೆಡ್ ಕ್ರಾಸ್ ಸಂಚಾಲಕ ಜೆ.ಸಿದ್ದರಾಜು, ಕ್ರೀಡಾ ಸಮಿತಿ ಸಂಚಾಲಕ ಎನ್.ಎನ್. ಕುಮಾರ್, ಎನ್ ಎಸ್ ಎಸ್ ಸಂಚಾಲಕ ಪ್ರಸನ್ನ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕಿ ಎಸ್ . ಅಶ್ವಿನಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-1442865459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.