ಅರಸೀಕೆರೆ: ನಮ್ಮೂರ ಶಾಲೆ ಮುಚ್ಚಲು ಎಂದಿಗೂ ಬಿಡುವುದಿಲ್ಲ ಎಂದು ಘೋಷಣೆ ಕೂಗುವ ಮೂಲಕ ತಾಲ್ಲೂಕಿನ ಮಾಡಾಳು ಗ್ರಾಮದ ಎಸ್ಡಿಎಂಸಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ‘ನಮ್ಮೂರ ಶಾಲೆ ನಮ್ಮಯ ಕಣ್ಮಣಿ’ ಬ್ಯಾನರ್ ಕಟ್ಟಿ ಪ್ರತಿರೋಧ ಚಳವಳಿಗೆ ಮಂಗಳವಾರ ಚಾಲನೆ ನೀಡಿದರು.

ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಪೋಷಕರ ಸಭೆಯಲ್ಲಿ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಚೈತ್ರಾ, ನಮ್ಮೂರ ಶಾಲೆ ಉಳಿಯಬೇಕು. ಕೆಪಿಎಸ್ ಯೋಜನೆ ರದ್ದಾಗಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು 5 ತಿಂಗಳಿಂದ ಹೋರಾಟ ನಡೆಸುತ್ತಿದ್ದೇವೆ. ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಪ್ರತಿಭಟನೆ, ಸಮಾವೇಶಗಳನ್ನು ನಡೆಸಿದ್ದೇವೆ. ಸಾಹಿತಿಗಳು, ಶಿಕ್ಷಣ ತಜ್ಞರು ನಮ್ಮ ಜೊತೆ ಧ್ವನಿಗೂಡಿಸಿದ್ದಾರೆ ಎಂದರು.

ಇಷ್ಟೆಲ್ಲ ಹೋರಾಟ ನಡೆದರೂ ರಾಜ್ಯ ಸರ್ಕಾರ, ಪೋಷಕರ, ಶಿಕ್ಷಣ ತಜ್ಞರ ಮಾತನ್ನು ಕೇಳದೇ ಹಟಮಾರಿತನ ತೋರುತ್ತಿದೆ. ಬಡವರು, ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾದರೂ ಪರವಾಗಿಲ್ಲ ಎಂಬಂತೆ ಕೆಪಿಎಸ್ ಯೋಜನೆ ಜಾರಿಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವಂತೆ ಜೂನ್ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. 2025ರ ಅಕ್ಟೋಬರ್ 15ರ ಆದೇಶದಂತೆ 3ರಿಂದ 5 ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಲಾಗುವುದು. ಮೂರು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲೆ ವ್ಯವಸ್ಥೆ ರೂಪಿಸುತ್ತೇವೆ, ಎಂಟು ಶಿಕ್ಷಣದ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ನೆಪ ಹೇಳುತ್ತ ರಾಜ್ಯದ ಜನತೆಗೆ ವಿಶ್ವಾಸದ್ರೋಹ ಮಾಡಲು ಹೊರಟಿದೆ ಎಂದು ದೂರಿದರು.

1ನೇ ತರಗತಿಯಿಂದಲೇ ಕನ್ನಡ ಮಾಧ್ಯಮದ ಜೊತೆ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗುತ್ತಿದೆ. ದ್ವಿಭಾಷಾ ಮಾಧ್ಯಮದ ಹೆಸರಲ್ಲಿ ಕೇವಲ ಇಂಗ್ಲಿಷ್ ಮಾಧ್ಯಮ ಕಲಿಸಲು ತಯಾರಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ತೆಗೆದು ಹಾಕುವುದನ್ನು ಒಪ್ಪುವುದಿಲ್ಲ ಎಂದರು.

ನಮ್ಮೂರ ಶಾಲೆಗೆ ಸಮರ್ಪಕ ಸೌಲಭ್ಯ, ಶಿಕ್ಷಕರನ್ನು ನೀಡಿ ಅಭಿವೃದ್ಧಿ ಪಡಿಸಬೇಕು. ಯಾವುದೇ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದು ಎಂದು ಆಗ್ರಹಿಸಿದರು.

ಸಭೆಯ ಬಳಿಕ ‘ನಮ್ಮೂರ ಶಾಲೆ ಉಳಿಯಬೇಕು’ ಎಂದು ಆಗ್ರಹಿಸಿ ಬರೆದಿರುವ ಪತ್ರಗಳನ್ನು ಬಿಇಒಗೆ ನೀಡುವ ಮೂಲಕ ಪತ್ರ ಚಳವಳಿಗೆ ಚಾಲನೆ ನೀಡಲಾಯಿತು. ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರ ನಡುವೆ ಜ್ಯೋತಿರಾವ್ ಫುಲೆ ಅವರ ಜನ್ಮ ದ್ವಿಶತಮಾನೋತ್ಸವ ಆಚರಿಸಲಾಯಿತು.

ಸಮಿತಿಯ ಅಧ್ಯಕ್ಷ ಕೊಟ್ರೇಶ್, ಕಾರ್ಯದರ್ಶಿ ಇಂದ್ರಮ್ಮ, ಉಪಾಧ್ಯಕ್ಷರಾದ ಯಾಸ್ಮಿನ್, ಶಿವಪ್ಪ, ಸದಸ್ಯರಾದ ಶಶಿಕಲಾ, ಮಂಜುನಾಥ್, ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಸುಷ್ಮಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-118704273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.