ಅರಸೀಕೆರೆ: ತಾಲ್ಲೂಕಿನ ಬಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯನ್ನು ಜಾವಗಲ್ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸುವ ಸರ್ಕಾರದ ಕ್ರಮವನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾನುವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಎಐಡಿಎಸ್ಒ ರಾಜ್ಯ ಘಟಕದ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬುದು ಶುದ್ಧ ಸುಳ್ಳು. ಬಂದೂರು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 101 ಹಾಗೂ ಪ್ರೌಢಶಾಲೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ದಾಖಲಾತಿ ಕಡಿಮೆ ಎಂಬ ನೆಪವೊಡ್ಡಿ ಕೆಪಿಎಸ್ ಯೋಜನೆ ಹೆಸರಲ್ಲಿ ಶಾಲೆಗಳನ್ನು ಮುಚ್ಚುವುದು ಅಪ್ರಜಾತಾಂತ್ರಿಕ. ಬಡ ಮಕ್ಕಳ ಭವಿಷ್ಯಕ್ಕೆ ಮಾರಕವಾದ ಈ ಯೋಜನೆ ವಿರುದ್ಧ ರಾಜ್ಯದ ಜನತೆ ಹೋರಾಟಕ್ಕೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

ಸಭೆಯಲ್ಲಿ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ ರಚಿಸಲಾಯಿತು. ಸಮಿತಿಯ ಶಾಂತಸ್ವಾಮಿ ಮಾತನಾಡಿ, ‘ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ಮಕ್ಕಳು ಇಲ್ಲೇ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ನಾವೆಲ್ಲರೂ ಇದೇ ಶಾಲೆಯ ವಿದ್ಯಾರ್ಥಿಗಳು. ದಾಖಲಾತಿಗಾಗಿ ಅರಸೀಕೆರೆಗೆ ತಿಂಗಳಾನುಗಟ್ಟಲೆ ಅಲೆಯಬೇಕಾಗುತ್ತದೆ. ಮತದಾನಕ್ಕೂ ತೊಂದರೆಯಾಗಲಿದೆ. ಶಾಲೆ ಉಳಿಸಿಕೊಳ್ಳಲು ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮಾತನಾಡಿ, ‘ನಮ್ಮದು ಪ್ರೌಢಶಾಲೆಯ ಮೊದಲ ಬ್ಯಾಚ್. ಇಲ್ಲಿಯವರೆಗೆ ಎಸ್ಎಸ್ಎಲ್ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ. ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಬಣ್ಣ ಬಳಿಸಿ ಅಭಿವೃದ್ಧಿಪಡಿಸಿದ್ದೇವೆ. ಇಂತಹ ಶಾಲೆ ಮುಚ್ಚುವ ಕ್ರಮ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಸುಷ್ಮಾ, ಉಪಾಧ್ಯಕ್ಷ ಅಭಿಷೇಕ್, ಗ್ರಾಮಸ್ಥರಾದ ಮೋಹನ್, ಬಸವಲಿಂಗೇಗೌಡ, ಪವನ್, ಮಂಜೇಗೌಡ, ದೇವರಾಜು, ಸುನಿಲ್, ರೇಣುಕ ಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-90935878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.