ಅರಸೀಕೆರೆ: ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ವಿಕಸನ ಸಂಸ್ಥೆ ಸಿಇಒ ವಿಭಾ ವರ್ಗೀಸ್ ಹೇಳಿದರು.

ತಾಲ್ಲೂಕಿನ ಬೆಂಡೇಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ನಾರಿ ಶಕ್ತಿ ಏನೆಂಬುದು ಶತಮಾಗಳಿಂದಲೇ ತಿಳಿಯುತ್ತದೆ. ಅಡುಗೆ ಮನೆಗೆ ಸೀಮಿತವಾಗಿದ್ದವಳು, ದೇಶ ಕಾಯುವ ಸೇನಾನಿಯಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ. ಜ್ಞಾನ, ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಮಹಿಳೆಯರ ಸಾಧನೆ ಬೇರೆಯವರಿಗೂ ಪ್ರೇರಣೆಯಾಗಿದೆ ಎಂದರು.

ದುಡಿಯುವ ಸಂಕಲ್ಪ ಹೊಂದಿರುವ ಸ್ತ್ರೀಯರಿಗೆ ಗಾರ್ಮೆಂಟ್ಸ್ ಕ್ಷೇತ್ರವೂ ಅವಕಾಶ ತೆರೆದಿಟ್ಟಿದೆ. ಸಂಪಾದನೆ ಜತೆಗೆ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಮರೆಯಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕಡೆಗೂ ಒತ್ತು ನೀಡಬೇಕು ಎಂದು ಹೇಳಿದರು.

ವಕೀಲ ವಿರೂಪಾಕ್ಷ ಕೌಟುಂಬಿಕ ದೌರ್ಜನ್ಯ ತಡೆ ಹಾಗೂ ಪೋಕ್ಸೊ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಡಾ.ಹೇಮಾ ಆರೋಗ್ಯ ರಕ್ಷಣೆ ಔಚಿತ್ಯ ಕುರಿತು ವಿವರಿಸಿದರು. ಪ್ರಭಾವತಿ, ಕವಿತಾ ಸೇರಿದಂತೆ ಗಾರ್ಮೆಂಟ್ಸ್ನಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-36-1121076094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.