ಅಥಣಿ: ‘ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದ ಇಂದಿನ ಕಾಲದಲ್ಲಿಯೂ ನಮ್ಮ ಶಿಕ್ಷಣ ಕೇವಲ ಮಾಹಿತಿಯನ್ನು ನೀಡುತ್ತಿದೆ. ಮಹತ್ವದ ಮಾಹಿತಿ ನೀಡುವ ಜೊತೆಗೆ ವಿದ್ಯಾರ್ಥಿಗಳ ಮೆದುಳಿಗೆ ತರಬೇತಿ ನೀಡುವ ಶಿಕ್ಷಣ ಅಗತ್ಯವಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆ ಕ್ರಿಯಾತ್ಮಕ ಮನೋಭಾವ ಬೆಳೆಸುವುದು ಇಂದಿನ ಅಗತ್ಯ’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಹೇಳಿದರು.

ಅವರು ಶನಿವಾರ ಇಲ್ಲಿನ ಜಾಧವಜಿ ಶಿಕ್ಷಣ ಸಂಸ್ಥೆಯ ಕೆ.ಎ. ಲೋಕಾಪುರ ಪದವಿ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ‘ಸ್ಮೃತಿ ಸುಮನ -2026’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜೊತೆಗೆ ಸುಂದರ ಬದುಕು ಕಟ್ಟಿಕೊಳ್ಳುವ ಶಿಕ್ಷಣ ನಮಗೆ ಬೇಕು. ಮೂರನೇ ತರಗತಿ ಕಲಿತ ಥಾಮಸ್ ಆಲ್ವಾ ಎಡಿಸನ್ ಸತತ ಪ್ರಯತ್ನದಿಂದ ಬಲ್ಬ್ ಕಂಡುಹಿಡಿದು ಜಗತ್ತಿಗೆ ಬೆಳಕು ನೀಡಿದ. ಅಕ್ಷರ ಕಲಿಯದ ಮಹಿಳೆಯರೂ ಚೆನ್ನಾಗಿ ಅಡುಗೆ ಮಾಡುವುದನ್ನು ಕಲಿತಿದ್ದಾರೆ. ಶಿಕ್ಷಣ ಇಲ್ಲದ ರೈತರೂ ಚೆನ್ನಾಗಿ ಉಳುಮೆ ಮಾಡಿ ಸಮೃದ್ಧ ಬೆಳೆ ಬೆಳೆಯಬಲ್ಲರು. ಆದರೆ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮವಿಶ್ವಾಸ ಮೂಡಿಸುವ ಶಿಕ್ಷಣ ನಮಗೆ ಬೇಕು. ಏನಾದರೂ ಹೊಸದು ಮಾಡುವ ಮನಸ್ಸು ನಮ್ಮದಾಗಬೇಕು’ ಎಂದರು.

ಸಮಾರಂಭವನ್ನು ಉದ್ಘಾಟಿಸಿದ ಮಹಾವಿದ್ಯಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅರವಿಂದರಾವ್ ದೇಶಪಾಂಡೆ ಮಾತನಾಡಿ, ‘ನಾವು ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು, ಮಾನವೀಯ ಮೌಲ್ಯ, ಬದುಕುವ ಕಲೆ, ಒಕ್ಕಲುತನದ ಅರಿವು ಮೂಡಿಸುವುದು ಅಗತ್ಯ’ ಎಂದು ಹೇಳಿದರು.

ಧಾರವಾಡದ ಶಿಕ್ಷಣ ತಜ್ಞ ಮಹೇಶ ಮಾಶಾಳ, ಅಧ್ಯಕ್ಷತೆ ವಹಿಸಿದ್ದ ಜಾದವಜಿ ಶಿಕ್ಷಣ ಸಂಸ್ಥೆಯ ಕಾರ್ಯಧ್ಯಕ್ಷ ಡಾ. ರಾಮ ಕುಲಕರ್ಣಿ ಹಾಗೂ ರಾಜು ಲೋಕಾಪುರ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ದೇವರೆಡ್ಡಿ, ಶ್ರೀಶೈಲ ಯಡಹಳ್ಳಿ, ಸಂತೋಷ ಬಡಕಂಬಿ, ಅಮೃತಾ ಧೂಪ, ಭಾಗ್ಯಶ್ರೀ ಗುಂಡಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-21-1377882494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.