ಅಥಣಿ: ‘ತಾಲ್ಲೂಕಿನ ಪ್ರತಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗಳನ್ನು ಸ್ಥಾಪನೆ ಮಾಡುವುದರ ಜೊತೆಗೆ ಜನತೆಗೆ, ರೈತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಉನ್ನತ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಮಹಾವಿದ್ಯಾಲಯಗಳನ್ನು ಆರಂಭಿಸುವ ಮೂಲಕ ಅಥಣಿ ಮತ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಆಗಿದೆ’ ಎಂದು ಗಚ್ಚಿನಮಠದ ಶಿವ ಬಸವ ಸ್ವಾಮೀಜಿ ಹೇಳಿದರು.

ಶಾಸಕ ಲಕ್ಷ್ಮಣ ಸವದಿ ಅವರು ಕೃಷ್ಣ ರೈತ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ ಪಾಟೀಲ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಅಥಣಿ ಕೀರ್ತಿ ಹೆಚ್ಚಿಸಿದ್ದಾರೆ. ಆದರ್ಶ ಶಾಲೆಯ ವಿದ್ಯಾರ್ಥಿ ದಶರಥ ಬೋಸಲೆ ಎರಡನೇ ಸ್ಥಾನ ಪಡೆದುಕೊಂಡಿದ್ದು, ಎಲ್ಲರಿಗೆ ಹೆಮ್ಮೆ. ಇದಕ್ಕೆಲ್ಲ ಕಳಸಪ್ರಾಯ ಎಂಬಂತೆ ಸವದಿ ಗ್ರಾಮದ ಯುವಕ ಬಸವರಾಜ ಕೆಂಪವಾಡ ಐಎಫ್ಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಬಂದಿರುವುದು ದೊಡ್ಡ ಹೆಮ್ಮೆ’ ಎಂದರು.

ಶೇ 85ಕ್ಕಿಂತ ಅಧಿಕ ಅಂಕ ಪಡೆದ 2,200 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶೇಗುಣಿಸಿಯ ವಿರಕ್ತ ಮಠದ ಮಹಾಂತ ಪ್ರಭು ಸ್ವಾಮೀಜಿ ಮಾತನಾಡಿದರು. ಉಪನ್ಯಾಸಕ ಶರಣಯ್ಯ ಭಂಡಾರಿ ಮಠ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಯುವ ಮುಖಂಡ ಚಿದಾನಂದ ಸವದಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ, ಶಿಕ್ಷಣ ಪ್ರೇಮಿ ಶ್ರೀಶೈಲ ನಾರಗೊಂಡ, ಸಿದರಾಯ ಯಲಡಗಿ, ಆನಂದ ದೇಶಪಾಂಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-21-421553538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.