ಅಥಣಿ: ‘ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಹೊಸ ಆವಿಷ್ಕಾರ, ಹೊಸ ವಿಷಯಗಳನ್ನು ಕಲಿಯುವುದು ಅಗತ್ಯ. ಪ್ರತಿಯೊಂದು ರಂಗದಲ್ಲಿ ಎಐ ತಂತ್ರಜ್ಞಾನ ಕೆಲಸ ಮಾಡುತ್ತಿದೆ. ಅದಕ್ಕಾಗಿ ಮಕ್ಕಳು ದೂರದೃಷ್ಟಿ ಇಟ್ಟುಕೊಂಡು ಮಾತೃಭಾಷೆ ಕನ್ನಡ ಭಾಷೆ ಕಲಿಯುವುದರ ಜೊತೆಗೆ ಇಂಗ್ಲಿಷ್ ಭಾಷೆ ಕಲಿಯುವುದು ಅಗತ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ತಾಲ್ಲೂಕಿನ ದೇಸಾಯರಹಟ್ಟಿಯ ನಮ್ಮೂರು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 79ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಸಾಯರಹಟ್ಟಿ ಗ್ರಾಮದ ಪ್ರಾಥಮಿಕ ಶಾಲೆಯನ್ನು ಬರುವ ಶೈಕ್ಷಣಿಕ ವರ್ಷದಿಂದ ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಆರಂಭಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪಶು ವೈದ್ಯಕೀಯ ಮಹಾವಿದ್ಯಾಲಯ 2 ವರ್ಷಗಳನ್ನು ಪೂರೈಸಿ, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಶೀಘ್ರದಲ್ಲಿಯೇ ಕೃಷಿ ಮಹಾವಿದ್ಯಾಲಯಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು. ತಾಲ್ಲೂಕಿನ ರೈತರ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣ ದೊರಕಬೇಕು ಎಂಬುದು ಉದ್ದೇಶವಾಗಿದೆ ಎಂದರು.

ಗ್ರಾಮದ ಹಿರಿಯ ಮುಖಂಡ ಸಿದ್ದರಾಮ ಕಳಸಣ್ಣವರ ಮಾತನಾಡಿ, ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿಯವರಿಗೆ ಮಾತ್ರ ಶಿಕ್ಷಣ ನಡೆಯುತ್ತಿದ್ದು, 9 ಮತ್ತು 10ನೇ ತರಗತಿಗಾಗಿ ಗ್ರಾಮದ ಹೆಣ್ಣು ಮಕ್ಕಳು ಬೇರೆ ಕಡೆಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆ ಮಂಜೂರು ಮಾಡಿದರೆ ಬಹಳಷ್ಟು ಅನುಕೂಲವಾಗುತ್ತದೆ. ಸಾರಿಗೆ ಬಸ್ ಸೌಲಭ್ಯ ಒದಗಿಸಬೇಕು, ತೋಟದ ವಸತಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು, ಗ್ರಾಮದೇವರ ದೇವಸ್ಥಾನಕ್ಕೆ ಒಂದು ಸಮುದಾಯ ಭವನ ನಿರ್ಮಿಸಿ ಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಚಿಕ್ಕೋಡಿ ಜಿಲ್ಲಾ ಉಪ ನಿರ್ದೇಶಕ ಸೀತಾರಾಮ ಆರ್.ಎ., ಮಹಾಂತಪ್ರಭು ಸ್ವಾಮೀಜಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಸಂತೋಷ ಯಾದವ, ಕಾಂಗ್ರೆಸ್ ಮುಖಂಡ ಶಾಮ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸಿದ್ದರಾಮ ಲೋಕನ್ನವರ, ಗೌಡಪ್ಪ ಖೋತ, ಶಿಕ್ಷಣ ಸಂಯೋಜಕ ಎಸ್. ವೈ. ಗಸ್ತಿ, ಸಂಪನ್ಮೂಲ ಅಧಿಕಾರಿ ಎ ವೈ. ಹೈಬತ್ತಿ, ಎಂ. ಎಚ್. ಜುಲಪಿ, ಎ.ಎಂ. ಖೋಬ್ರಿ, ಖoಡು ಪವಾರ, ಅಪ್ಪಸಾಹೇಬ ಅವಟಿ, ನಾರಾಯಣ ಸಾವಂತ, ಭೈರಪ್ಪ ಪವಾರ, ಶಿವಾಜಿ ನಿಕ್ಕಂ, ಅಪ್ಪಾಸಾಹೇಬ ಚವ್ಹಾಣ, ರಾಮ ಚೌವ್ಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-21-1484126014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.