ಅಥಣಿ: ತಾಲ್ಲೂಕಿನ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಶ್ರಮಿಕರ ವಸತಿ ಶಾಲೆ ನಿರ್ಮಿಸಲಾಗುತ್ತಿದೆ. ಬರುವ 18 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಂಡು ಕಾರ್ಮಿಕ ಸಚಿವರನ್ನು ಆಮಂತ್ರಿಸಿ ಉದ್ಘಾಟನೆ ಮಾಡಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಅಥಣಿ ತಾಲ್ಲೂಕಿನ ಸಂಕೋನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕಟ್ಟಿ ಗ್ರಾಮದ ಹತ್ತಿರವಿರುವ ಆರ್ಟಿಒ ಕಚೇರಿ ಪಕ್ಕದ ಸರ್ಕಾರಿ ಜಾಗದಲ್ಲಿ ಕಾರ್ಮಿಕ ಇಲಾಖೆಯ ಶ್ರಮಿಕರ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ನೋಂದಾಯಿತ 7 ಸಾವಿರ ಕಾರ್ಮಿಕರು ಇದ್ದಾರೆ. 350 ಮಕ್ಕಳ ಸಾಮರ್ಥ್ಯವಿರುವ ಈ ವಸತಿ ಶಾಲೆಯ ನಿರ್ಮಾಣಕ್ಕೆ 8 ಎಕರೆ ಸರ್ಕಾರಿ ಜಾಗ ಪಡೆದುಕೊಳ್ಳಲಾಗಿದೆ ಎಂದರು.

ಮುಖಂಡ ಪ್ರಕಾಶ ಮಹಾಜನ, ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ, ಉಪಾಧ್ಯಕ್ಷೆ ಭುವನೇಶ್ವರಿ ಯಕoಚ್ಚಿ ,ಕಾರ್ಮಿಕ ಕಲ್ಯಾಣ ಮಂಡಳಿಯ ಉಪ ಆಯುಕ್ತ ಪಿ.ಜಿ.ನಾಗೇಶ್, ಜಿಲ್ಲಾ ಕಾರ್ಮಿಕ ನಿರೀಕ್ಷಕ ಮಲ್ಲಿಕಾರ್ಜುನ ಜೋಗೇರಿ, ಅಥಣಿ ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಢಾಲೆ, ಪುರಸಭೆ ಸದಸ್ಯ ಸಂತೋಷ ಸಾವಡಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-21-2128158802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.