ಬೆಟ್ಟದಪುರ: ಸಮೀಪದ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಿಡಿಒ ವಿಶ್ವನಾಥ್ ವಿದ್ಯಾರ್ಥಿಗಳಿಗೆ ಹೂಗುಚ್ಛ ಹಾಗೂ ಪೆನ್ನುಗಳನ್ನು ನೀಡಿ ಸ್ವಾಗತಿಸಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ‘ರಾಜ್ಯದ ಅತ್ಯುತ್ತಮ ಪ್ರೌಢಶಾಲೆಗಳಲ್ಲಿ ಒಂದಾಗಿರುವ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಗೆ ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಸಾಧಿಸಿದ್ದು, 2025-26ನೇ ಸಾಲಿನ ಅತ್ಯುತ್ತಮ ಎಸ್ಡಿಎಂಸಿ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆಯಿಂದ ಪಡೆದಿರುವುದು ಶಾಲೆಯ ಶೈಕ್ಷಣಿಕ ಸಾಧನೆ ಮತ್ತು ಅಭಿವೃದ್ಧಿಗೆ ಸಾಕ್ಷಿಯಾಗಿದೆ’ ಎಂದರು. ಯುವ ಕಾಂಗ್ರೆಸ್ ಮುಖಂಡ ಫಣೀಶ್ ಮಾತನಾಡಿ, ‘ಶಾಲೆಯ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಫಲಿತಾಂಶಗಳಿಂದಾಗಿ ಸುತ್ತಮುತ್ತಲಿನ ಗ್ರಾಮಗಳಿಂದಲೂ ದಾಖಲಾತಿಗಾಗಿ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ’ ಎಂದು ತಿಳಿಸಿದರು.

ಎಸ್ಡಿಎಂಸಿ ಅಧ್ಯಕ್ಷೆ ರಮ್ಯಾ, ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅಶೋಕ್, ಮಹದೇವಶೆಟ್ಟಿ, ಅಮರಯ್ಯಹಿರೇಮಠ, ನವೀನ್, ಮುಖ್ಯ ಶಿಕ್ಷಕ ನಾಗಶೆಟ್ಟಿ, ಶಿಕ್ಷಕ ರಜನಿಕಾಂತ್, ದೇವರಾಜ, ಸ್ವಾಮಿ, ಮಾದನಾಯಕ್, ಚೆಲುವರಾಜು, ರವಿ, ಇಂದ್ರಮ್ಮ ಹಾಗೂ ಪುಷ್ಪಲತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-901324758

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.