ಔರಾದ್(ಎಸ್)(ಜನವಾಡ): ‘ಮಕ್ಕಳಲ್ಲಿ ಶಿಕ್ಷಣದ ಜತೆ ಮಾನವೀಯ ಮೌಲ್ಯಗಳನ್ನೂ ಬೆಳೆಸಬೇಕು’ ಎಂದು ಬಿಜೆಪಿ ಮುಖಂಡ ರಾಜರೆಡ್ಡಿ ಶಹಾಬಾದ್ ಹೇಳಿದರು.

ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದ ಮಾರುತಿ ಮಾಸ್ಟರ್ ಶಿಕ್ಷಣ ಸಂಸ್ಥೆಯ ಸಂಚಾಲಿತ ವಿದ್ಯಾ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಹಾಗೂ ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳು. ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ಮನೆಯಿಂದಲೇ ಆರಂಭವಾಗಬೇಕು’ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಮಾರುತಿ ಮಾಸ್ಟರ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಿ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಾಜರೆಡ್ಡಿ ಗಂಗ್ವಾರ್, ಸೂರ್ಯಕಾಂತ ಪಾಟೀಲ, ವಿಜಯಕುಮಾರ ಚೌಡಾ, ನಾಗಶೆಟ್ಟಿ ಚಟ್ನಳ್ಳಿ, ಸಂಗ್ರಾಮ ಹೊಕ್ರಾಣ, ರಾಜಮತಿ ಸೌದಾಗರ್ ಇದ್ದರು.

ಕಾವೇರಿ ಸ್ವಾಗತಿಸಿದರು. ನಿಕಿತಾ ನಿರೂಪಿಸಿದರು. ವಿದ್ಯಾಸಾಗರ ಧಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-33-89886520

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.