ಔರಾದ್: 2026-27ನೇ ಸಾಲಿನ ಶಾಲಾ ಆರಂಭವನ್ನು ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಶಾಲೆ ಆರಂಭವನ್ನು ಹಬ್ಬದಂತೆ ಆಚರಿಸಬೇಕು ಎಂಬ ಸರ್ಕಾರದ ಆದೇಶದಂತೆ ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ಅಲಂಕಾರ ಮಾಡಲಾಯಿತು. ಆರಂಭದ ದಿನವೇ ಮಕ್ಕಳು ಸಮವಸ್ತ್ರದಲ್ಲಿ ಬರುವ ಹಾಗೆ ನೋಡಿಕೊಂಡಿದ್ದು ವಿಶೇಷ ಎನಿಸಿತು. ಶಿಕ್ಷಕರು, ಸ್ಥಳೀಯರು ಮಕ್ಕಳನ್ನು ಭಾಜಾ ಭಜಂತ್ರಿಯೊಂದಿಗೆ ಬರ ಮಾಡಿಕೊಂಡರು. ಮಧ್ಯಾಹ್ನ ಸಿಹಿ ಊಟ ಮಾಡಿ ಬಡಿಸಲಾಯಿತು.

ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶಾಸಕ ಪ್ರಭು ಚವಾಣ್ ಮಕ್ಕಳ ಮೇಲೆ ಹೂ ಹಾಕುವ ಮೂಲಕ ಶಾಲೆ ಆರಂಭಕ್ಕೆ ಚಾಲನೆ ನೀಡಿದರು.

‘ಎಲ್ಲ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಬೇಕು. ಉತ್ತಮ ಫಲಿತಾಂಶ ನೀಡುವ ಜೊತೆಗೆ ಎಲ್ಲರೂ ಸರಿಯಾಗಿ ಭೋಧನೆ ಮಾಡಬೇಕು. ಸಮಯ ಪಾಲನೆ ಮಾಡಬೇಕು. ಮಕ್ಕಳ ಮನೆಗೆ ಭೇಟಿ ನೀಡಿ ನಾವು ಚೆನ್ನಾಗಿ ಪಾಠ ಮಾಡುತ್ತೇವೆ ಎಂದು ಪಾಲಕರ ಮನವೊಲಿಸಬೇಕು. ಪಠ್ಯ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಶಾಲೆಯ ಆವರಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಕಡ್ಡಾಯವಾಗಿ ಕಂಪೌಂಡ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇರಲೇಬೇಕು. ಎಲ್ಲಿಯಾದರೂ ಕೊರತೆಯಿದ್ದಲ್ಲಿ ನನಗೆ ತಿಳಿಸಿ ಒದಗಿಸಲು ಕ್ರಮ ವಹಿಸುತ್ತೇನೆ ಎಂದರು.

ಡಿಡಿಪಿಯು ಚಂದ್ರಕಾಂತ ಶಹಾಬಾದಕರ್, ಬಿಇಒ ವಿ. ಗಾಯಕವಾಡ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ, ಧೂಳಪ್ಪ ಮಳೆನೂರ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಪಂಢರಿ ಆಡೆ, ಸೂರ್ಯಕಾಂತ ಬಿರಾದಾರ, ವಿಶ್ವನಾಥ ಬಿರಾದಾರ, ಪ್ರಾಂಶುಪಾಲ ಓಂಪ್ರಕಾಶ ದಡ್ಡೆ, ಇನಾಯತ ಅಲಿ ಸೌದಾಗರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1371164059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.