ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿ ಪರೀಕ್ಷೆ ನಡೆಸದೆ ಎಲ್ಲರನ್ನೂ ಉತ್ತೀರ್ಣಗೊಳಿಸಬೇಕು ಎಂದು ಹಲವು ಶಿಕ್ಷಣ ತಜ್ಞರು, ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯದ ವಿ.ಪಿ.ನಿರಂಜನಾರಾಧ್ಯ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಬಿ. ಶ್ರೀಪಾದ ಭಟ್, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಶುಭಂಕರ್, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಮಾವಳ್ಳಿ ಶಂಕರ್, ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ ಬಸವರಾಜ ಗುರಿಕಾರ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆಯ ಡಿ.ಜಗನ್ನಾಥರಾವ್ ಸೇರಿದಂತೆ ಹಲವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಎಸ್.ಜಿ.ಸಿದ್ದರಾಮಯ್ಯ

‘ಜೂನ್ 25ರಿಂದ ಎಸ್ಸೆಸ್ಸೆಲ್ಲಿ ಪರೀಕ್ಷೆ ಆರಂಭ ಎಂದು ಸರ್ಕಾರ ಈಗಾಗಲೇ ಪ್ರಕಟಿಸಿದೆ. ಆದರೆ ವಿದ್ಯಾರ್ಥಿಗಳ ಜೀವದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸದೆ ಇರುವುದು ಒಳಿತು. ನಮ್ಮ ಕಳಕಳಿ ಪರೀಕ್ಷೆ ಬೇಡವೆನ್ನುವುದಷ್ಟೇ ಹೊರತು ಪ್ರಮಾಣಪತ್ರ ನೀಡಬಾರದು ಎಂದಲ್ಲ. ಪರೀಕ್ಷೆ ಇಲ್ಲದೆಯೂ ಎಲ್ಲಾ ಮಕ್ಕಳಿಗೆ ಎಂದಿನಂತೆ ಎಸ್ಸೆಸ್ಸೆಲ್ಸಿ ಪ್ರಮಾಣ ಪತ್ರ ದೊರೆಯಬೇಕು. ಕೋವಿಡ್ನ ಈ ಸಂಕಷ್ಟದ ಸಂದರ್ಭದಲ್ಲಿ ಇದೊಂದು ನಿರ್ಣಾಯಕ ತೀರ್ಮಾನವಾಗಲಿದ್ದು ಲಕ್ಷ-ಲಕ್ಷ ಮಕ್ಕಳು, ಪಾಲಕರು ಆತಂಕದಿಂದ ಹೊರಬರಲು ಸಾಧ್ಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಈಗಾಗಲೇ ಹಲವು ರಾಜ್ಯಗಳು ಪರೀಕ್ಷೆ ರದ್ದುಮಾಡಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿವೆ. ಪರೀಕ್ಷೆಗೆ ಸಂಬಂಧಿಸಿದಂತೆ 25 ಲಕ್ಷದಿಂದ 30ಲಕ್ಷ ಮಂದಿ ಆತಂಕದಲ್ಲಿದ್ದಾರೆ.

ವಲಸೆ ಕಾರ್ಮಿಕರ ವಿಚಾರದಲ್ಲಿ ಎಡವಿದಂತೆ ಇಲ್ಲೂ ಸಹ ಭಾರಿ ಎಡವಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಕೊಡಬೇಕು. ಇದರಿಂದ ಈ ಬಾರಿ ಅಪಾರ ಜೀವ, ಆರ್ಥಿಕ ವೆಚ್ಚ ಉಳಿಸಬಹುದು’ ಎಂದು ಸಲಹೆ ನೀಡಿದ್ದಾರೆ.

‘ಮಕ್ಕಳ ಹಿತದೃಷ್ಟಿ ಗಮನಿಸಿ’

‘ಸೂಕ್ತ ಸಿದ್ಧತೆ, ಮುನ್ನೆಚ್ಚರಿಕೆಯೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ ಎಂದು ನಾನು ಈ ಮೊದಲು ಹೇಳಿದ್ದೆ. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಮುಖ್ಯವಾಗಿ ಇತರ ರಾಜ್ಯಗಳಿಂದ ಬಂದವರಿಂದಾಗಿ ಕೋವಿಡ್–19 ಪ್ರಕರಣ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಈ ಪರಿಸ್ಥಿತಿಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸದೆ ಇರುವುದೇ ಉತ್ತಮ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.