ಹುಬ್ಬಳ್ಳಿಯಲ್ಲಿ 19, 20ರಂದು ಮೇಳ
ಪಿಯುಸಿ ಬಳಿಕ ಮುಂದೇನು ಎಂಬ ಬಗ್ಗೆ ಯೋಚನೆ ಅಥವಾ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಆಲೋಚನೆಯಿದ್ದರೆ, ಹುಬ್ಬಳ್ಳಿಯ ನೆಹರೂ ಕ್ರೀಡಾಂಗಣದಲ್ಲಿ ಏಪ್ರಿಲ್ 19 ಮತ್ತು 20ರಂದು ನಡೆಯುವ ಕರ್ನಾಟಕದ ಅತಿದೊಡ್ಡ ‘ಎಡ್ಯುವರ್ಸ್’ ಶೈಕ್ಷಣಿಕ ಮೇಳಕ್ಕೆ ಭೇಟಿ ನೀಡಿ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ಈ ಮೇಳದಲ್ಲಿ ಸಿಗಲಿದೆ. ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ಆಯೋಜಿಸಿರುವ ಈ ಮೇಳದಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ. ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ಚರ್ಚಿಸಬಹುದು. ಶೈಕ್ಷಣಿಕ ಕ್ಷೇತ್ರ ಕುರಿತು ಸಮಗ್ರ ಮಾಹಿತಿ ಪಡೆಯಬಹುದು.