ಬಾದಾಮಿ: ‘ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವಾಗಲಿದೆ ’ ಎಂದು ಎಸ್.ಬಿ. ಮಮದಾಪೂರ ಪದವಿ ಕಾಲೇಜಿನ ಪ್ರಾಧ್ಯಾಪಕ ಶಿವಕುಮಾರ ಅಂಗಡಿ ಹೇಳಿದರು.

ಇಲ್ಲಿನ ಹೇಮರಡ್ಡಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಿ.ಎ, ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸಾಂಸ್ಕೃತಿಕ, ಕ್ರೀಡಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಸಂಘಟಕ ಪ್ರಮೋದ ಚೌಗಲೆ ಮಾತನಾಡಿ, ‘ಶಿಸ್ತು, ದೇಶಾಭಿಮಾನ ಮತ್ತು ಸಾಮಾಜಿಕ ಸೇವೆಗಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಪದವಿ ಅಧ್ಯಯನದೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನೂ ಹೆಚ್ಚಿಸಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಿವಾನಂದ ರಾಯನಗೌಡರ ಮಾತನಾಡಿ, ‘ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿದ ನಂತರ ಸ್ನಾತಕೋತ್ತರ ಪದವಿ ಜೊತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು’ ಎಂದು ತಿಳಿಸಿದರು.

ಪ್ರಾಧ್ಯಾಪಕ ಎಂ.ಎನ್. ಸಿದ್ದಲಿಂಗಪ್ಪನವರ ವಾರ್ಷಿಕ ವರದಿ ವಾಚಿಸಿದರು. ಎಂ.ಐ. ಬಾರಾವಲಿ, ಹನುಮಂತ ಅಪ್ಪನ್ನವರ, ಬಿ.ಎಂ. ಕಲ್ಲೂರ, ಕೆ.ಅರ್. ಪಾಟೀಲ, ಚಂದ್ರಶೇಖರ್ ಹೆಗಡೆ, ಸೀಮಾ ಜಿ.ಕೆ. ಇದ್ದರು. ಗೋವರ್ಧನ ಪಿ.ಬಿ. ಸ್ವಾಗತಿಸಿದರು. ಬಾಬುರಾಯಣ್ಣ ಧನ್ನೂರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1899042550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.