ಬಾಗಲಕೋಟೆ: ‘ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳೆಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ’ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿ ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.

ಬಿವಿವಿ ಸಂಘದ ಬಸವೇಶ್ವರ ಕಲಾ ಕಾಲೇಜಿನ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸಹಯೋಗದಲ್ಲಿಬುಧವಾರ ನಡೆದ ‘ಕಲಾ ಸಿರಿ’ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಮಾತನಾಡಿ, ‘ಕೀಳರಿಮೆಯ ಭಾವನೆ ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ’ ಎಂದರು.

ವಿದ್ಯಾರ್ಥಿನಿಯರ ಡೊಳ್ಳು ಕುಣಿತ ಮತ್ತು ಸಾಂಪ್ರದಾಯಿಕ ಉಡುಗೆಗಳು ಗಮನ ಸೆಳೆದವು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಚಟುವಟಿಕೆಯ ಸಂಯೋಜಕ ಕೆ.ವಿ. ಮಠ, ಎ.ಯು. ರಾಠೋಡ, ತಾನಾಜಿ ವಿಭೂತಿ, ಗಾಯತ್ರಿ ರಾಠೋಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-1684379904

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.