ಬಾಗಲಕೋಟೆ: ‘ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಹಯೋಗದಲ್ಲಿ ನವನಗರದ ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ಹಮ್ಮಿಕೊಂಡಿರುವ ಸೃಜನಾತ್ಮಕ ಚಟುವಟಿಕೆಗಳ ಉಚಿತ ಬೇಸಿಗೆ ಶಿಬಿರಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಕೆ.ಪ್ರಭಾಕರ ಮಾತನಾಡಿ, ‘ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವುದು. ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರ ಆಯೋಜಿಸಲಾಗಿದೆ’ ಎಂದರು.

‘ಮಕ್ಕಳಿಗೆ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ ಮತ್ತು ಯೋಗ, ಕರಾಟೆ ವಿವಿಧ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಮೇಶ ಸೂಳಿಕೇರಿ, ಸಂಪನ್ಮೂಲ ವ್ಯಕ್ತಿಗಳಾದ ಪದ್ಮಾವತಿ ತಳ್ಳಿಕೇರಿ, ಭವಾನಿ ಕಂಬಾರ, ಸಂಸ್ಕೃತಿ ಕಾಂಬಳೆ ಹಾಗೂ ಇಲಾಖೆಯ ಸುರೇಶ ಹುಲಮನಿ, ಕಮಲಾಕ್ಷಿ ಚವ್ಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-19-34172036

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.