ಬಾಗಲಕೋಟೆ: ಕೇಂದ್ರದ ಸಂಸ್ಕೃತಿ ಸಚಿವಾಲಯದ ವತಿಯಿಂದ ಜ್ಞಾನ ಭಾರತಮ್ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ದಾಖಲೆಗಳ ಸಮಗ್ರ ಸಮೀಕ್ಷೆ ಮಾಡಲಾಗುತ್ತಿದೆ.

ಅವುಗಳನ್ನು ತಂತ್ರಜ್ಞಾನ ಬಳಸಿ ಶಾಶ್ವತವಾಗಿ ಸಂರಕ್ಷಿಸುವ ಉದ್ದೇಶದಿಂದ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುದಾನ ಹಾಗೂ ಪ್ರಕಟಣೆ ಕಾರ್ಯ ಕೈಗೊಳ್ಳಲಾಗುತ್ತಿದೆ.

ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುತ್ತಿದ್ದು, ಭವಿಷ್ಯದ ಪೀಳಿಗೆಗೆ ಜ್ಞಾನ ಸಂಪತ್ತನ್ನು ಉಳಿಸಿ ಬಳಸಿಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ.

ಈ ಮಹತ್ವದ ಜ್ಞಾನ ಭಾರತ ಮಿಷನ್ ಯೋಜನೆಯನ್ನು ರಾಜ್ಯದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ. ಇದರ ಭಾಗವಾಗಿ ಹಸ್ತಪ್ರತಿಗಳ ಸಮಗ್ರ ಸರ್ವೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ.

ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಬಳಿ ಹಸ್ತಪ್ರತಿಗಳ ಸಂಗ್ರಹವಿದ್ದಲ್ಲಿ, ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ.137, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಕಚೇರಿಗೆ ಅಥವಾ ಮೊ.ಸಂ.78295 38950, 73386 28536 ಮಾಹಿತಿ ನೀಡುವಂತೆ ಉಪ ನಿರ್ದೇಶಕ ಜಿ.ಎಸ್.ಹಿತ್ತಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-19-1108331434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.