ಬಾಗಲಕೋಟೆ: ‘ಶ್ರಮದಾನ, ಸೇವಾ ಭಾವನೆ ಮೂಲಕ ಶ್ರಮ ಸಂಸ್ಕೃತಿ ಕಲಿಸಿದರೆ, ಸಹೋದರತ್ವ ಭಾವ, ಸಹಬಾಳ್ವೆ, ಸಹಕಾರ ಮನೋಭಾವ ಬೆಳೆಸುವಲ್ಲಿ ಎನ್ಎಸ್ಎಸ್ ಶಿಬಿರಗಳು ಪೂರಕವಾಗಿವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಹೇಳಿದರು.

ಬಾಗಲಕೋಟೆ ಸಮೀಪದ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ಸಭಾ ಮಂಟಪದಲ್ಲಿ ಭಾನುವಾರ ನಡೆದ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಬದುಕಿನ ಜೀವನದ ಮೌಲ್ಯಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ’ ಎಂದರು.

ಮುಖ್ಯ ಅತಿಥಿಯಾಗಿದ್ದ ಗುಳೇದಗುಡ್ಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ರೇವಣಸಿದ್ಧಪ್ಪ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಅವುಗಳ ಪ್ರೋತ್ಸಾಹಕ್ಕೆ ಶಿಬಿರಗಳು ಅಗತ್ಯವಾಗಿವೆ’ ಎಂದು ತಿಳಿಸಿದರು.

ಅತಿಥಿಗಳಾಗಿದ್ದ ಹಿರಿಯ ಯೋಗ ತರಬೇತುದಾರ ರಾಜಶೇಖರ ಅಡಿಕೆನವರ, ಸಂಗಮೇಶ ಬಡಿಗೇರ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ‘ಎನ್ಎಸ್ಎಸ್ ಶಿಬಿರಗಳು ಶಿಬಿರಾರ್ಥಿಗಳಲ್ಲಿ ಸೇವಾ ಮನೋಭಾವ, ಸಮಯ ಪಾಲನೆ, ಶಿಸ್ತು, ಪ್ರಾಮಾಣಿಕತೆ ಬೆಳೆಸುತ್ತವೆ. ಶಿಬಿರಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ಎನ್ಎಸ್ಎಸ್. ಘಟಕದ ಕ್ರಾರ್ಯಕ್ರಮಾಧಿಕಾರಿ ಪ್ರೊ.ಸಂಪತ್ ಲಮಾಣಿ, ಐಕ್ಯೂಎಸಿ ಸಂಚಾಲಕ ಬಸವರಾಜ ಬೀಳಗಿ, ಚಂದ್ರಶೇಖರ ಕಾಳನ್ನವರ, ಕ್ರೀಡಾ ನಿರ್ದೇಶಕ ನೀಲಪ್ಪ ಕುರಿ, ಪ್ರೊ.ಶಿವಶಂಕರ ಪ್ರಸಾದ, ಪ್ರೇಮಾ ಗೆಜ್ಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-19-1652151945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.