ಬಾಗಲಕೋಟೆ: ‘ಸಾಮಾಜಿಕ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಸೇವೆಯಿಂದ ಪ್ರಾಮಾಣಿಕ ವ್ಯಕ್ತಿತ್ವ ಬೆಳೆಯುತ್ತದೆ’ ಎಂದು ಬಾಗಲಕೋಟೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ದಳವಾಯಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಆಶ್ರಯದಲ್ಲಿ ಕಾಲೇಜಿನ ವಿಶ್ವಮಾನವ ಸಭಾಂಗಣದಲ್ಲಿ ಸೋಮವಾರ ನಡೆದ ಬೇಸಿಗೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತ ಸ್ಕೌಟ್ಸ್ ಗೈಡ್ಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳು ಮೂಡಿಸುವ ಮೂಲಕ ಆದರ್ಶ ವ್ಯಕ್ತಿತ್ವ ಬೆಳೆಸುತ್ತದೆ’ ಎಂದರು.

ಮುಖ್ಯ ಅತಿಥಿಯಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟಿಕ ನಾರಾಯಣ ಯಳ್ಳಿಗುತ್ತಿ ಮಾತನಾಡಿ, ‘ಶಿಬಿರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ದಕ್ಷತೆಯಿಂದ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಪೂರಕವಾಗುತ್ತವೆ’ ಎಂದು ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ದ ಜಿಲ್ಲಾ ಸಂಘಟಕ ಪ್ರಮೋದ ಚೌಗಲೆ ಮಾತನಾಡಿ, ‘ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳಲ್ಲಿರುವ ವಿದ್ಯಾರ್ಥಿಗಳು ಶಿಬಿರದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಾಮಾಜಿಕ ಮತ್ತು ಪರಿಸರಾತ್ಮಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

‘ಈಗ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಇಂತಹ ಸಂದರ್ಭಗಳಲ್ಲಿ ತಮ್ಮ ಸುತ್ತಲಿನ ವಾತಾವರಣದಲ್ಲಿರುವ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಪಕ್ಷಿ, ಪರಿಸರ ಸಂರಕ್ಷಣೆ ಮಾಡಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೂನೀಡಬೇಕು. ಇಂತಹ ಶಿಬಿರಗಳು ಜೀವನದ ಒಳ್ಳೆಯ ಪಾಠಗಳು ಕಲಿಸುತ್ತವೆ. ನಾಯಕತ್ವ, ಸಹಬಾಳ್ವೆ, ಸಹಜೀವನ, ಸಹಕಾರದಂತಹ ಮೌಲ್ಯಗಳನ್ನು ಕಲಿಯಲು ಸಾಧ್ಯವಿದೆ’ ಎಂದು ಹೇಳಿದರು.

ರೋವರ್ಸ್ ಲೀಡರ್ ಪ್ರೊ.ಪರಸಪ್ಪ ತಳವಾರ ಮಾತನಾಡಿದರು. ರೇಂಜರ್ಸ್ ಲೀಡರ್ ಸುಮಂಗಲಾ ಮೇಟಿ ಸ್ವಾಗತಿಸಿದರು. ರೇಂಜರ್ಸ್ ಲೀಡರ್ ಪ್ರೊ.ಸವಿತಾ ಬದಾಮಿ, ಐಕ್ಯೂಎಸಿ ಸಂಚಾಲಕ ಬಸವರಾಜ ಬೀಳಗಿ, ಪ್ರೊ.ಸಂಪತ್ ಲಮಾಣಿ, ಪ್ರೊ.ಶಿವಶಂಕರ ಪ್ರಸಾದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-19-1607170737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.