ಬಾಗಲಕೋಟೆ: ದೇಶದ ಜನಸಂಖ್ಯೆಯಲ್ಲಿ ಸಿಂಹಪಾಲು ಹೊಂದಿರುವ ಯುವ ಸಮುದಾಯ ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲು ಸಾಧ್ಯ ಎಂದು ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮೀನಾ ಚಂದಾವರಕರ್ ಅಭಿಪ್ರಾಯಪಟ್ಟರು.

ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಪ್ರಗತಿಯಲ್ಲಿ ಯುವಕರು ಮಹತ್ವದ ಪಾತ್ರ ವಹಿಸುವ ಛಲ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಗೌರವ ಕಾರ್ಯದರ್ಶಿ ಡಾ.ಗಿರೀಶ ಮಸೂರಕರ ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಆಗಾಗ ಆಗಮಿಸಿ ಕಾಲೇಜಿನ ಪ್ರಗತಿಯ ಅವಲೋಕನ ಮಾಡಬೇಕು. ಉತ್ತಮ ಸಲಹೆ ನೀಡಬೇಕು ಎಂದು ಹೇಳಿದರು.

ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿ, ನೆನಪುಗಳ, ಸಾಧನೆಗಳ, ಗೆಳೆತನದ ಮತ್ತು ಸಂಸ್ಥೆಯ ಜೊತೆಗಿನ ಬಾಂಧವ್ಯದ ಸಂಭ್ರಮಾಚರಣೆಯಾಗಿದೆಎಂದರು.

ಹಳೆಯ ವಿದ್ಯಾರ್ಥಿಗಳ ಪರವಾಗಿ ಎಸ್.ಆರ್.ನಾಗಣ್ಣವರ, ಎಸ್.ಎಂ.ಖೋತ, ಪಿ.ಬಿ.ಭಜಂತ್ರಿ, ರವಿ ಕುಲಕರ್ಣಿ, ಎಸ್.ಟಿ.ಸಿದ್ದಲಿಂಗಪ್ಪನವರ, ಸಿ.ಎಲ್.ಹೂಗಾರ, ನಾಗಲಕ್ಷ್ಮಿ ರಾಯಚೂರ ಮತ್ತು ಪರಶುರಾಮ ಜಾಧವ, ನಿವೃತ್ತ ಪ್ರಾಧ್ಯಾಪಕ ಎಸ್.ಬಿ. ಪರ್ವತೀಕರ ಮಾತನಾಡಿದರು. ಕಾರ್ಯಾಧ್ಯಕ್ಷೆ ಶ್ರೀಲತಾ ಹೆರಂಜಲ ಅಧ್ಯಕ್ಷತೆ ವಹಿಸಿದ್ದರು.

ಪಿ.ಆರ್. ಜೋಶಿ, ಉಪಾಧ್ಯಕ್ಷ ಜಿ.ಎನ್.ಕುಲಕರ್ಣಿ, ನಿವೃತ್ತ ಪ್ರಾಧ್ಯಾಪಕರಾದ ಪಿ.ಎಸ್.ಹುಯಿಲಗೋಳ, ಆರ್.ಆರ್.ದೇಶಮುಖ, ಜಿ.ಜೆ.ಮೊರಬ, ಎಂ.ವಿ.ಮಹಾಡೀಕರ, ವಿ.ಎಸ್.ಮಠ, ಎಸ್.ಕೆ.ದೇಸಾಯಿ, ಆರ್.ಎಸ್.ದೇಸಾಯಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-19-1707745975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.