ಬಳ್ಳಾರಿ: ‘ಇಂದಿನ ಕಾಲಘಟ್ಟದಲ್ಲಿ ಮಕ್ಕಳ ಕಲ್ಪನಾ ಶಕ್ತಿ ಕ್ಷೀಣಿಸುತ್ತಿದೆ. ಕೃತಕ ಬುದ್ಧಿಮತ್ತೆ (ಎಐ) ಮನುಷ್ಯನ ಆಲೋಚನಾ ಕ್ರಮವನ್ನೇ ಬದಲಿಸುತ್ತಿದೆ. ಈ ಹೊತ್ತಿನಲ್ಲಿ ಪುಸ್ತಕಗಳು ಮಾತ್ರ ವಿಮರ್ಶಾತ್ಮಕ ಚಿಂತನೆ ಬೆಳೆಸಲು ಮತ್ತು ಸಹೃದಯಿಗಳನ್ನಾಗಿ ಮಾಡಲು ಸಾಧ್ಯ’ ಎಂದು ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅಭಿಪ್ರಾಯಪಟ್ಟರು.

ನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ನಡೆದ ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥ ಪ್ರೊ. ಶಿರಗಾನಹಳ್ಳಿ ಶಾಂತಾ ನಾಯ್ಕ ಅವರ ‘ನಡೆದಷ್ಟೂ ದಾರಿ ದೂರ’ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

‘ಎಐ ಕೃತಕವೇ ಹೊರತು ಎಂದಿಗೂ ಅಸಲಿಯಾಗದು. ಓದು ಮಾತ್ರವೇ ಶಾಶ್ವತ. ಶಾಂತನಾಯಕ ಅವರಿಗೆ ಸಾಹಿತ್ಯದ ಮೇಲೆ ಅಪಾರ ಹಿಡಿತವಿದೆ. ಅವರ ಹೆಸರು ಶಾಂತವಾಗಿದ್ದರೂ, ಬರಹಗಳಲ್ಲಿನ ವಿಚಾರಗಳು ಕ್ರಾಂತಿಕಾರಕವಾಗಿವೆ. ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಈ ಕಾಲದಲ್ಲಿ ಚಿತ್ರಗಳ ಮೂಲಕ ವಿಚಾರ ಮಂಡಿಸಿರುವುದು ಶ್ಲಾಘನೀಯ’ ಎಂದರು.

ಉದ್ಘಾಟನೆ ನೆರವೇರಿಸಿದ ಸಿರಿಗೆರಿ ಪನ್ನರಾಜ್ ಅವರು, ಪ್ರಾದೇಶಿಕ ಅಸಮಾನತೆ ವಿರುದ್ಧ ಬಳ್ಳಾರಿ ಜಿಲ್ಲೆಯ ಹೋರಾಟಗಳನ್ನು ನೆನಪಿಸಿಕೊಂಡರು. ‘1990ರ ಹೈದರಾಬಾದ್ ಕರ್ನಾಟಕ ಮಂಡಳಿ ರಚನೆಯಾದಾಗ ಬಳ್ಳಾರಿಯನ್ನು ಹೊರಗಿಡಲಾಗಿತ್ತು. ಸುದೀರ್ಘ ಹೋರಾಟದ ನಂತರ ಜಿಲ್ಲೆಗೆ ನ್ಯಾಯ ಸಿಕ್ಕಿತು. ಇಂತಹ ಅಸಮಾನತೆಗಳ ವಿರುದ್ಧ ಸಾಹಿತ್ಯ ಸದಾ ಧ್ವನಿ ಎತ್ತಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ ರಾಬರ್ಟ್ ಜೋಸ್ ವಹಿಸಿದ್ದರು. ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಬಿ.ಕೆ. ಅತಿಥಿಗಳನ್ನು ಸ್ವಾಗತಿಸಿದರು. ಅಣ್ಣಾಜಿ ಕೃಷ್ಣಾ ರೆಡ್ಡಿ ಕಾರ್ಯಕ್ರಮ ನಿರೂಪಿಸಿದರು. ವಿವಿಯ ಹಣಕಾಸು ಅಧಿಕಾರಿ ಸ್ಫೂರ್ತಿ ಕೆ.ಜಿ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-1002642863

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.