ಬಳ್ಳಾರಿ: ನಗರದ ಹಾನಗಲ್ ಶ್ರೀಕುಮಾರೇಶ್ವರ (ಎಚ್ಎಸ್ಕೆ) ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕೃತಕ ಬುದ್ಧಿಮತ್ತೆ ಡಿಪ್ಲೊಮಾ ಕೋರ್ಸ್ ಅನ್ನು ಆರಂಭಿಸಲಾಗುತ್ತಿದೆ ಎಂದು ಕಾಲೇಜಿನ ಆಡಳಿತ ಅಧ್ಯಕ್ಷ ಪಲ್ಲೇದ ಪ್ರಭುಲಿಂಗ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಬಳ್ಳಾರಿ ಜಿಲ್ಲೆಯಲ್ಲಿಯೇ ಪಾಲಿಟೆಕ್ನಿಕ್ ಹಂತದಲ್ಲಿ ಎಐ ವಿಭಾಗವನ್ನು ಪರಿಚಯಿಸುತ್ತಿರುವ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಹಾನಗಲ್ ಪಾಲಿಟೆಕ್ನಿಕ್ ಪಾತ್ರವಾಗಿದೆ’ ಎಂದು ತಿಳಿಸಿದರು.

ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿನಿಂದಲೇ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ (ಎಐ) ಡಿಪ್ಲೊಮಾ ಪ್ರೋಗ್ರಾಂ ಆರಂಭವಾಗಲಿದೆ. ಈ ನೂತನ ವಿಭಾಗಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಹಾಗೂ ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ಅಗತ್ಯ ಅನುಮತಿ ದೊರೆತಿದೆ. ವಾರ್ಷಿಕವಾಗಿ 60 ವಿದ್ಯಾರ್ಥಿಗಳ ಪ್ರವೇಶಾತಿ ಸಾಮರ್ಥ್ಯದೊಂದಿಗೆ ಈ ವಿಭಾಗವು ಕಾರ್ಯನಿರ್ವಹಿಸಲಿದೆ’ ಎಂದರು.

ಇಂದಿನ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳ ಬೇಡಿಕೆ ಮತ್ತು ಮಾರುಕಟ್ಟೆಯ ಅಗತ್ಯತೆಯನ್ನು ಮನಗಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಶುಪಾಲರಾದ ಶ್ರೀಶೈಲ ಗೌಡ, ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-25-2067699562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.