ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿದ ಪಾಲಕರು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಶಾಲೆಯ ಮುಂದೆ ಬ್ಯಾನರ್ ಕಟ್ಟಿ ಪ್ರತಿಭಟನೆ ನಡೆಸಿದ ಪೋಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುವ ಮೊದಲು ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸದೆ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

ಎಐಡಿಎಸ್ಒ ಮುಖಂಡ ಜನಗದೀಶ ನೇಮಕಲ್ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರುದ್ಧ ರಾಜ್ಯವ್ಯಾಪಿ ಹೋರಾಟಗಳು ನಡೆಯುತ್ತಿವೆ. ಆದರೂ ಸರ್ಕಾರ ಈ ಬಗ್ಗೆ ಚಿಂತಿಸದೆ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಈ ಕುರಿತು ಸರ್ಕಾರ ಮರುಚಿಂತನೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಅತಿಥಿ ಶಿಕ್ಷಕ ಶೇಖರ, ಮುಖಂಡರಾದ ಗಾದಿಲಿಂಗಪ್ಪ, ಕರಿಬಸಪ್ಪ, ನವೀನ್, ಮಲ್ಲಿಕಾರ್ಜುನ, ಕಾಂತೇಶ, ಶಾಂತಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-878270326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.