ಬಳ್ಳಾರಿ: ಬೇಸಿಗೆ ರಜೆಯ ನಂತರ ಜಿಲ್ಲೆಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಸೋಮವಾರ ಪುನರಾರಂಭಗೊಂಡಿದ್ದು, ಶಾಲಾ ಆವರಣಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.

ಹೊಸ ಶೈಕ್ಷಣಿಕ ವರ್ಷದ ಮೊದಲ ದಿನ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಶಾಲೆಗಳು ವಿಶೇಷ ಸಿದ್ಧತೆ ಮಾಡಿಕೊಂಡಿದ್ದವು. ಶಿಕ್ಷಕರು ಶನಿವಾರ ಮತ್ತು ಭಾನುವಾರವೇ ಶಾಲಾ ಕೊಠಡಿ, ಶೌಚಾಲಯ, ಅಡುಗೆ ಮನೆ ಹಾಗೂ ಆವರಣವನ್ನು ಸ್ವಚ್ಛಗೊಳಿಸಿದ್ದರು.

ಸರ್ಕಾರದ ಆದೇಶದಂತೆ 1ನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೆ ತರಗತಿಗಳು ಆರಂಭಗೊಂಡಿದ್ದು, ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳಿಗೆ ಹೂವು ನೀಡಿ ಬರಮಾಡಿಕೊಳ್ಳಲಾಯಿತು. ಶಾಲಾ ಕಟ್ಟಡಗಳನ್ನು ತಳಿರು ತೋರಣ, ಬಣ್ಣಬಣ್ಣದ ರಂಗೋಲಿ ಹಾಗೂ ಸ್ವಾಗತ ಫಲಕಗಳಿಂದ ಅಲಂಕೃತಗೊಂಡಿದ್ದವು.

ಆರಂಭೋತ್ಸವದ ಅಂಗವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿ ತಿಂಡಿ ನೀಡಲಾಯಿತು. ಮೊದಲ ದಿನವಾಗಿದ್ದರಿಂದ ಅನೇಕ ಕಡೆಗಳಲ್ಲಿ ಪೂರ್ಣ ಪ್ರಮಾಣದ ಪಾಠ-ಪ್ರವಚನಗಳು ನಡೆಯದೆ, ವಿದ್ಯಾರ್ಥಿಗಳ ಪರಿಚಯ ಹಾಗೂ ಪುಸ್ತಕ ವಿತರಣೆಗೆ ಸೀಮಿತವಾಗಿದ್ದವು. ಕೆಲವು ಶಾಲೆಗಳಲ್ಲಿ ಮಕ್ಕಳು ಇನ್ನು ಊರುಗಳಿಂದ ಮರಳದ ಕಾರಣ ಹಾಜರಾತಿ ಕೊಂಚ ಕಡಿಮೆಯಿತ್ತು. ಒಟ್ಟಾರೆ ಜಿಲ್ಲೆಯಾದ್ಯಂತ ಶಾಲೆಗಳ ಪುನರಾರಂಭವು ಉತ್ಸವದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು.

ಶಾಲಾ ಪ್ರಾರಂಭೋತ್ಸವ ಅಚ್ಚುಕಟ್ಟಾಗಿ ನಡೆದಿದೆ. ಶೇ 80ರಷ್ಟು ಶಾಲೆಗಳಲ್ಲಿ ಪಠ್ಯ ಮತ್ತು ಸಮವಸ್ತ್ರಗಳನ್ನು ವಿತರಣೆ ಮಾಡಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ಸೋಮವಾರ ಶಾಲೆಗಳು ಆರಂಭವಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕರು ಜೆ.ಎನ್ ತಿಪ್ಪೇಸ್ವಾಮಿ ಪ್ರಜಾವಾಣಿಗೆ ತಿಳಿಸಿದರು.

ಕೂಡ್ಲಿಗಿ: ‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಾವು ಬದ್ದರಾಗಿದ್ದೇವೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ತಾಲ್ಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ದಾಖಲಾತಿ ಆಂದೋಲನ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಮುಖಂಡರಾದ ಪಾಪಣ್ಣ, ಲಿಂಗನಗೌಡ, ಆನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-2069158452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.