ಬಳ್ಳಾರಿ: ‘ವಿದ್ಯಾರ್ಥಿಗಳು ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಬಂಡಿಹಟ್ಟಿ ಪ್ರೌಢಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕ ಹೆಚ್. ಏಸಯ್ಯ ಹೇಳಿದರು.

ನಗರದ ಕೋಟೆ ಪ್ರದೇಶದ ಮೇಧಾ ಪದವಿ ಪೂರ್ವ ವಿದ್ಯಾಲಯದಲ್ಲಿ ಮೈ ಭಾರತ್ (ಮೇರಾ ಯುವ ಭಾರತ್) ಹಾಗೂ ಚಿಗುರು ಕಲಾತಂಡ ಇಬ್ರಾಹಿಂಪುರ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಎದುರಿಸಿದ ಸಂಕಷ್ಟಗಳನ್ನು ಸ್ಮರಿಸಬೇಕೆಂದ ಅವರು, ಸಂವಿಧಾನದ ಮಹತ್ವ ಮತ್ತು ಮತದಾನದ ಪ್ರಾಮುಖ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಡಾ. ರಾಮ್ ಕಿರಣ್ ಕೆ. ಅಧ್ಯಕ್ಷತೆ ವಹಿಸಿದ್ದರು. ಜಾನಪದ ಕಲಾವಿದ ಹನುಮಯ್ಯ ಕ್ರಾಂತಿ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-325483397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.