ಬಳ್ಳಾರಿ: ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಾಂಸ್ಕೃತಿಕ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ರಂಗತೋರಣ ಸಂಸ್ಥೆ ಬಯಲಾಟ ತರಬೇತಿ ಶಿಬಿರ ಆಯೋಜಿಸಿದೆ.

ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರತಿದಿನ ಸಂಜೆ 4ರಿಂದ 7ರವರೆಗೆ ನಗರದ ರಾಜಕುಮಾರ ರಸ್ತೆಯ ಕೆ.ಎಂ. ಟ್ರೇಡರ್ಸ್ ಹಿಂಭಾಗದ ‘ಪಾಂಚಜನ್ಯ’ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ. 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಶಿಬಿರ ರೂಪಿಸಲಾಗಿದೆ.

ಜಾನಪದ ವಿದ್ವಾಂಸ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ಅವರು ಮಕ್ಕಳಿಗೆ ಬಯಲಾಟದ ಪ್ರಸಂಗ ಕಲಿಸಿ ಕೊಡಲಿದ್ದಾರೆ. ಶಿಬಿರದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಬಯಲಾಟ ಪ್ರದರ್ಶನವೂ ನಡೆಯಲಿದೆ.

ಆಯ್ದ 15 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 95133 13113 ಸಂಪರ್ಕಿಸಬಹುದು ಎಂದು ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-733247201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.