ಬಳ್ಳಾರಿ: ‘ವಿಶ್ವವಿದ್ಯಾಲಯಗಳು ತಂತ್ರಜ್ಞಾನ ಆಧಾರಿತ ಶಿಕ್ಷಣ ಹಾಗೂ ವಿನೂತನ ಮಾದರಿಯ ಗ್ರಂಥಾಲಯಗಳನ್ನು ಹೊಂದಿರಬೇಕು. ಸಾಮಾನ್ಯ ವಿಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇವು ದಾರಿದೀಪವಾಗಬೇಕು’ ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಹೇಳಿದರು.

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರೊ.ಸಿದ್ದು ಪಿ. ಆಲಗೂರ ಸಭಾಂಗಣದಲ್ಲಿ ಗುರುವಾರದಿಂದ ಆರಂಭವಾದ ‘ಎರಡು ದಿನಗಳ ವಿಜ್ಞಾನ ಪ್ರದರ್ಶನ-2026’ ಮೇಳ ಉದ್ಘಾಟಿಸಿ ಮಾತನಾಡಿದರು.

‘ಇಂದಿನ ಎಐ (ಕೃತಕ ಬುದ್ಧಿಮತ್ತೆ) ಯುಗದಲ್ಲಿ ವಿಜ್ಞಾನವನ್ನು ಸ್ಥಳೀಯ ಭಾಷೆಯಲ್ಲಿ ಜನಸಾಮಾನ್ಯರಿಗೆ ತಲುಪುವಂತೆ ರೂಪಾಂತರಗೊಳಿಸುವುದು ಅಗತ್ಯ. ಎಲ್ಲ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಅನಿವಾರ್ಯ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಗ್ರಂಥಾಲಯ ಹಾಗೂ ಮೂಲಸೌಕರ್ಯ ಒದಗಿಸಲು ವಿಶೇಷ ಆಸಕ್ತಿ ವಹಿಸಲಾಗಿದೆ’ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹ್ಮದ್ ಹಾರಿಸ್ ಸುಮೈರ್ ಮಾತನಾಡಿ, ‘ವಿಜ್ಞಾನವು ಶೋಧನೆ ಮತ್ತು ಸೃಜನಾತ್ಮಕ ವಿಚಾರಗಳಿಗೆ ವೇದಿಕೆಯಾಗಿದೆ. ವಿಜ್ಞಾನ ಬೆಳೆದಂತೆ ಸವಾಲುಗಳೂ ಹೆಚ್ಚುತ್ತವೆ. ರಾಮನ್ ಪರಿಣಾಮವನ್ನು ಇಂದು ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಶೋಧನೆಗಳಲ್ಲಿ ಭಾಗಿಯಾಗಬೇಕು’ ಎಂದು ಕರೆ ನೀಡಿದರು.

ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿ, ‘ವಿದ್ಯಾರ್ಥಿಗಳು ಸ್ಮಾರ್ಟ್ಫೋನ್ ಗೀಳಿಗೆ ಬೀಳುವ ಬದಲು ‘ಸ್ಮಾರ್ಟ್’ಆಗಿ ಕಾರ್ಯನಿರ್ವಹಿಸಿದರೆ ಜ್ಞಾನಾಭಿವೃದ್ಧಿಯಾಗುತ್ತದೆ. ವಿಜ್ಞಾನದ ಪ್ರಯೋಗಗಳು ಮಾನವೀಯತೆಗೆ ಮಾರಕವಾಗಬಾರದು. ಇಂತಹ ಮೇಳಗಳು ವಿದ್ಯಾರ್ಥಿಗಳಲ್ಲಿ ಹೊಸ ಅನ್ವೇಷಣೆಯ ಆಸಕ್ತಿ ಮೂಡಿಸುತ್ತವೆ’ ಎಂದು ತಿಳಿಸಿದರು.

ಕುಲಪತಿ ಪ್ರೊ. ಎಂ. ಮುನಿರಾಜು ಮಾತನಾಡಿ, ‘ವೈಜ್ಞಾನಿಕ ಮೇಳಗಳು ವಿದ್ಯಾರ್ಥಿಗಳಲ್ಲಿ ಕಲಿಕಾ ವಾತಾವರಣವನ್ನು ಉತ್ತೇಜಿಸುತ್ತವೆ. ಸಂಶೋಧಕರು ಜನಪರ ಅಭಿವೃದ್ಧಿಯ ಚಿಂತನೆಯುಳ್ಳ ವಿಚಾರಗಳನ್ನು ಹೊರತರಬೇಕು’ ಎಂದರು.

ಅನ್ವಯಿಕ ವಿಜ್ಞಾನ ನಿಕಾಯದ ಡೀನ್ ಪ್ರೊ. ಹನುಮೇಶ ವೈದ್ಯ ಅವರ ಮಾರ್ಗದರ್ಶನದಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ‘ಎಐ ಇಂಟಿಗ್ರೇಟೆಡ್ ಡೈನಾಮಿಕ ಮಾಡೆಲ್’, ‘ಬೆಸ್ಟ್ ಆಫ್ ಬಳ್ಳಾರಿ’ ಹಾಗೂ ‘ಆಸ್ಕ್ ವಿಎಸ್ಕೆಯು’ (ಚಾಟ್ ಜಿಪಿಟಿ) ವೆಬ್ಸೈಟ್ಗಳನ್ನು ಗಣ್ಯರು ಬಿಡುಗಡೆ ಮಾಡಿದರು.

ಪ್ರದರ್ಶನದಲ್ಲಿ ವಿವಿಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ 100ಕ್ಕೂ ಹೆಚ್ಚು ವೈವಿಧ್ಯಮಯ ವಿಜ್ಞಾನ ಪ್ರಯೋಗಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಎನ್. ಎಂ. ಸಾಲಿ, ವಿತ್ತಾಧಿಕಾರಿ ಸ್ಫೂರ್ತಿ ಕೆ.ಜಿ., ಡೀನ್ಗಳಾದ ಪ್ರೊ. ಉದಯ್ ಕುಮಾರ್ ಖಡ್ಕೆ, ಸಹ ಸಂಚಾಲಕ ಡಾ. ಪಿ. ಶರತ್ ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-25-1911109211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.