ಹರಪನಹಳ್ಳಿ: ‘ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಮೂರು ಕಡೆ ವೃತ್ತಿಪರ ಕೋರ್ಸ್ಗಳಿರುವ ಪದವಿ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ವಿವಿಯ ಹೈಪವರ್ ಕಮಿಟಿ ಅಧ್ಯಕ್ಷರೂ ಆಗಿರುವ ಅನ್ವಯಿಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹನುಮೇಶ ವೈದ್ಯ ಹೇಳಿದರು.

ನಗರದ ಟಿಎಂಎಇ ಸಂಸ್ಥೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಜರುಗಿದ ಉಪನ್ಯಾಸ, ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಳ್ಳಾರಿ ವಿಎಸ್ಕೆವಿವಿ ಕ್ಯಾಂಪಸ್, ಸಂಡೂರಿನ ನಂದಿಹಳ್ಳಿಯ ಅಧ್ಯಯನ ಕೇಂದ್ರದಲ್ಲಿ ಪದವಿ, ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗುತ್ತಿದೆ. ಸಾಮಾನ್ಯ ಬಿಸಿಎ ಎಐ ಮತ್ತು ಮೆಷಿನ್ ಲರ್ನಿಂಗ್, ಬಿಬಿಎ ಲಾಜಿಸ್ಟಿಕ್, ಬಿ.ಕಾಂ ಡಾಟಾ ಎಂಟ್ರಿ ಮತ್ತು ಬಿ.ಎ ಪದವಿಗಳಂತೆ ಜೀವನ ಕೌಶಲ ಮತ್ತು ವೃತ್ತಿ ಆಧಾರಿತ ಹೊಸ ಕೋರ್ಸ್ ಆರಂಭಿಸಲಾಗುವುದು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲೇ ತರಗತಿ ಆರಂಭಿಸಲಾಗುವುದು. ಇಲ್ಲಿನ ಸ್ಥಿತಿಗತಿ ಕುರಿತು ವಿಶ್ವವಿದ್ಯಾಲಯಕ್ಕೆ ಶೀಘ್ರ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಶಿಕ್ಷಣ ಮಹಾವಿದ್ಯಾಲಯದ ಡೀನ್ ಟಿ.ಎಂ. ರಾಜಶೇಖರ ಮಾತನಾಡಿ, ‘ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಹೊಸ ಕೌಶಲ ಕಲಿಸುವ ಪದವಿ ಕೋರ್ಸ್ ಆರಂಭಿಸುತ್ತಿರುವುದು ಸ್ವಾಗತಾರ್ಹ. ಇದರಿಂದ ವಿದ್ಯಾರ್ಥಿಗಳ ವಲಸೆ ತಪ್ಪಲಿದೆ’ ಎಂದು ಹೇಳಿದರು.

ವಿಶ್ವವಿದ್ಯಾಲಯದ ತಂಡದ ಸದಸ್ಯರಾದ ಪ್ರೊ. ರಾಮರ್ಟ್ ಜಾರ್ಜ್, ಪ್ರಾಧ್ಯಾಪಕ ಪ್ರೊ. ದಿನೇಶ್ ಮಾತನಾಡಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಟ್ಟಡ ಪರಿಶೀಲಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಸತೀಶ್, ಟಿಎಂಎಇ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಸಿ.ಎಂ.ವೀರೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-279529405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.