ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ/ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಓ (ಎಐಡಿಎಸ್ಒ) ಹಾಗೂ ವಿವಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ‘ಹಾಸ್ಟೆಲ್ನಲ್ಲಿ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಪೌಷ್ಟಿಕವಲ್ಲದ ಆಹಾರ ನೀಡಲಾಗುತ್ತಿದೆ. ಸ್ವಚ್ಛತೆ ಇಲ್ಲದ ಅಡುಗೆ ಕೋಣೆ, ಸರಿಯಾದ ತರಕಾರಿ ಇಲ್ಲದ ಸಾಂಬಾರು ಹಾಗೂ ಜಿಡ್ಡುಗಟ್ಟಿದ ಎಣ್ಣೆಯ ಬಳಕೆ ವಿದ್ಯಾರ್ಥಿಗಳ ಆರೋ ಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ‘ಸಮಸ್ಯೆಯ ಬಗ್ಗೆ ವಿವಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪರಸ್ಪರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿವೆ. ಇವರ ನಿರ್ಲಕ್ಷ್ಯದಿಂದಾಗಿ ಬಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ’ ಎಂದರು.

ವಸತಿ ನಿಲಯಗಳನ್ನು ನೇರವಾಗಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡಿಸಬೇಕು ಮತ್ತು ಅನುದಾನ ಹೆಚ್ಚಿಸಬೇಕು ಎಂಬ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಈರಣ್ಣ, ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-147746757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.