ಬಳ್ಳಾರಿ: ‘ನಮ್ಮೂರ ಶಾಲೆ ಇಲ್ಲೇ ಉಳಿಯಬೇಕು, ಯಾವುದೇ ಕಾರಣಕ್ಕೂ ಕೆಪಿಎಸ್ ಶಾಲೆಗೆ ಮಕ್ಕಳನ್ನು ಕಳುಹಿಸುವುದಿಲ್ಲ’ ಎಂದು ಪಟ್ಟುಹಿಡಿದು ತಾಲ್ಲೂಕಿನ ತಗ್ಗಿನ ಬೂದಿಹಾಳ್ ಗ್ರಾಮಸ್ಥರು ಶಾಲೆಯ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಪೋಷಕರು ಪಾಲ್ಗೊಂಡು ಸರ್ಕಾರದ ನಡೆ ಖಂಡಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಗ್ರಾಮದ ಶಾಲೆಯನ್ನು 5 ಕಿ.ಮೀ ದೂರದ ಕಕ್ಕಬೇವಿನಹಳ್ಳಿ ಶಾಲೆಯೊಂದಿಗೆ ವಿಲೀನಗೊಳಿಸುತ್ತಿರುವುದು ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಪಿಡಿಒಗೆ ಮನವಿ ಸಲ್ಲಿಸಿದರು.

ಎಐಡಿಎಸ್ಒ ಜಿಲ್ಲಾ ಘಟಕದ ಉಪಾಧ್ಯಕ್ಷೆ ಎಂ. ಶಾಂತಿ ಮಾತನಾಡಿ, ‘ಗ್ರಾಮದ ಶಾಲೆಯಲ್ಲಿ 120ಕ್ಕೂ ಹೆಚ್ಚು ಮಕ್ಕಳಿದ್ದು, ಬಡತನದ ಹಿನ್ನೆಲೆಯವರಾಗಿದ್ದಾರೆ. ವಿಲೀನದ ಹೆಸರಿನಲ್ಲಿ ಶಾಲೆ ಮುಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡ ಮಾಧ್ಯಮವನ್ನು ಉಳಿಸಿ, ಇಂಗ್ಲಿಷ್ಗೆ ಪ್ರತ್ಯೇಕ ಶಿಕ್ಷಕರನ್ನು ನೇಮಿಸಬೇಕು. ಸರ್ಕಾರ ತಕ್ಷಣವೇ ವಿಲೀನ ಪ್ರಕ್ರಿಯೆ ಕೈಬಿಟ್ಟು ಶಾಲೆಯನ್ನು ಬಲಪಡಿಸಬೇಕು’ ಎಂದು ಆಗ್ರಹಿಸಿದರು.

ಸಮಿತಿಯ ಸದಸ್ಯರಾದ ನೀಲಮ್ಮ, ವಂಡ್ರಮ್ಮ, ಪೋಷಕಿ ಸಾಕಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-1757136474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.