ಬಸವಕಲ್ಯಾಣ: ‘ಸತತ ಪರಿಶ್ರಮವೇ ಯಶಸ್ಸಿನ ಗುಟ್ಟು. ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಲು ನಿರಂತರ ಪ್ರಯತ್ನ ಅಗತ್ಯ’ ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವಿಭಾಗೀಯ ಕಾರ್ಯದರ್ಶಿ ನರಸಿಂಗರೆಡ್ಡಿ ಗದ್ಲೇಗಾಂವ ಹೇಳಿದ್ದಾರೆ.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜ್ಞಾನ ಗಳಿಕೆ ಮತ್ತು ಸತತ ಪ್ರಯತ್ನಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆಯನ್ನೇ ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ರಾಷ್ಟ್ರಪುರುಷರು, ಮಹನೀಯರಿಂದ ಪ್ರೇರಣೆ ಪಡೆಯಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರಹ್ಲಾದ್ ಚೆಂಗಟೆ ಮಾತನಾಡಿ, ‘ಶಿಸ್ತು, ಸಂಯಮವಿದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಬಹುದು. ನಿಷ್ಠೆ, ಪ್ರಾಮಾಣಿಕತೆಗೆ ಸಮಾಜದಿಂದ ಮನ್ನಣೆ ದೊರಕುವುದು ನಿಶ್ಚಿತ’ ಎಂದರು.

ಮಹಾಲೇಶ ಡಿ.ಎಸ್.ಮಾತನಾಡಿ, ‘ಉದ್ಯೋಗ ಪಡೆದುಕೊಳ್ಳುವುದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸವುದು ಅವಶ್ಯಕ. ಈ ಬಗ್ಗೆಯೂ ಸಿದ್ಧತೆ ಕೈಗೊಳ್ಳಬೇಕು. ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.

ಹುಮನಾಬಾದ್ ಪ್ರಥಮದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ ಡೊಂಗ್ರೆ ಸಸಿಗೆ ನೀರೆರೆದು ಉದ್ಘಾಟಿಸಿದರು. ಚಂದ್ರಕಾಂತ ಗಾಯಕವಾಡ, ಶ್ರೀಕಾಂತ ಚೌಹಾಣ್, ಮೀನಾಕ್ಷಿ ಬಿರಾದಾರ, ಶರಣಬಸಪ್ಪ ಜನ್ನಾ, ಸುಭಾಷ ಮಚಕೂರಿ, ವಿಶ್ವನಾಥ ಬನಸೋಡೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-1199544487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.