ಬಸವಕಲ್ಯಾಣ: ‘ಖೇರ್ಡಾ(ಬಿ) ಶಿವಲಿಂಗೇಶ್ವರರ ಮಠವು ಸರ್ವ ಸಮಾನತೆಯ ತತ್ವ ಸಾರುವ ಮಠವಾಗಿದೆ. ಇದು ಅತ್ಯಂತ ಪುರಾತನ ಹಾಗೂ ತನ್ನದೆಯಾದ ಐತಿಹಾಸ ಹೊಂದಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಸತೀಶಕುಮಾರ ಹೊಸಮನಿ ಹೇಳಿದರು.

ತಾಲ್ಲೂಕಿನ ಖೇರ್ಡಾ(ಬಿ) ಶರಣ ಶಿವಲಿಂಗೇಶ್ವರ ಮಠದ 98ನೇ ಜಾತ್ರೆ ಅಂಗವಾಗಿ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಠದಲ್ಲಿ ಜಾತಿ ಭೇದವಿಲ್ಲ. 12ನೇ ಶತಮಾನದ ಬಸವಾದಿ ಶರಣರ ಸಂದೇಶ ಇಲ್ಲಿ ಪಾಲನೆಯಾಗುತ್ತಿದೆ. ಮಠ ಶೈಕ್ಷಣಿಕವಾಗಿಯೂ ಸೇವೆ ಸಲ್ಲಿಸುತ್ತಿದೆ’ ಎಂದರು.

ಪೀಠಾಧಿಪತಿ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾದ ಸತೀಶಕುಮಾರ ಅವರು ಇದೇ ಗ್ರಾಮದವರಾಗಿದ್ದು, ಉನ್ನತ ಹುದ್ದೆಯಲ್ಲಿದ್ದು ಜನಸೇವೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.

ಗ್ರಂಥಾಲಯ ಇಲಾಖೆಯಲ್ಲಿ ಅಧಿಕಾರಿಯಾಗಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದು, ಅವರ ಎಲ್ಲ ಸಾಧನೆಯನ್ನು ಪರಿಗಣಿಸಿ ಮಠದಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದರು.

ಈ ಸಂದರ್ಭದಲ್ಲಿ ಸತೀಶಕುಮಾರ ಹೊಸಮನಿ ಅವರಿಗೆ ‘ಶಿಕ್ಷಣ ಸೇವಾ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಮಂಠಾಳ ಅಭಿನವ ಚನ್ನಬಸವ ಸ್ವಾಮೀಜಿ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-33-1028683011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.