ಬಸವನಬಾಗೇವಾಡಿ: ವಿಷಯ ಜ್ಞಾನಕ್ಕಿಂತ ಭಾಷಾಜ್ಞಾನ ನಮಗೆ ಹೆಚ್ಚಿನ ಯಶಸ್ಸನ್ನು ತಂದುಕೊಡುತ್ತಿದೆ. ಕಲಿಕಾ ಹಂತದಲ್ಲಿಯೇ ವಿವಿಧ ಭಾಷೆಗಳ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಮುಖ್ಯವಾಗಿ ಇಂಗ್ಲಿಷ್ ಭಾಷೆಯ ಪ್ರಭುತ್ವ ಗಳಿಸಿಕೊಳ್ಳುವುದು ತುಂಬಾ ಅವಶ್ಯಕವಾಗಿದೆ ಎಂದು ಪ್ರಾಧ್ಯಾಪಕಿ ಅರ್ಚನಾ ದಂಡಾವತಿ ಅಭಿಪ್ರಾಯಪಟ್ಟರು.

ಪಟ್ಟಣದ ಬಿ.ಎಲ್.ಡಿ.ಇ.ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ವಿಲಿಯಂ ಷೇಕ್ಸ್ಪಿಯರ್ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಇಂಗ್ಲಿಷ್ ಭಾಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಾಧ್ಯಾಪಕಿ ಆರ್.ಎಂ.ಮುಜಾವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಎ.ವಿ.ಸೂರ್ಯವಂಶಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಐ.ಕ್ಯೂ.ಎ.ಸಿ. ಸಂಯೋಜಕರಾದ ಪ್ರೊ.ಸಿ.ಪಿ.ಧಡೇಕರ, ಎಸ್.ಜೆ.ಸೂರ್ಯವಂಶಿ, ಎ.ಯು.ಪಾಟೀಲ, ಪ್ರಶಾಂತ ಗೂಳಪ್ಪನವರ, ಡಾ.ಕಿರಣ ಸೂಡಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-1751028576

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.