ಬಸವಾಪಟ್ಟಣ: ‘ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯಗಳನ್ನು ಶಿಕ್ಷಣ ಇಲಾಖೆ ಒದಗಿಸಿದ್ದು, ಪೋಷಕರು ತಮ್ಮ ಮಕ್ಕಳನ್ನು ಗ್ರಾಮದ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಇಲ್ಲಿನ ಉಪತಹಶೀಲ್ದಾರ್ ಎನ್.ಎಲ್.ನೀಲಮ್ಮ ಮನವಿ ಮಾಡಿದರು.

ಸೋಮವಾರ ಇಲ್ಲಿ ನಡೆದ ಸರ್ಕಾರಿ ಶಾಲಾ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರು, ಸುಭದ್ರ ಕಟ್ಟಡ, ಪಾಠೋಪ ಕರಣ, ಪೀಠೋಪಕರಣ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಉತ್ತಮ ಪಾಠಪ್ರವಚನ, ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗಾಗಿ ರೂಪಿಸಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಇವುಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪೋಷಕರು ಸಹಕರಿಸಬೇಕು’ ಎಂದು ನೀಲಮ್ಮ ಹೇಳಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಹಾಲೇಶ್ ಮಾತನಾಡಿದರು.

ಮುಖ್ಯ ಶಿಕ್ಷಕ ಡಿ.ಆರ್.ರಾಜಪ್ಪ ವಿದ್ಯಾರ್ಥಿಗಳಿಗೆ ಹೂಗುಚ್ಛ ಮತ್ತು ಪುಸ್ತಕ ಗಳನ್ನು ನೀಡಿ ಬರಮಾಡಿಕೊಂಡರು. ಶಾಲಾ ಶಿಕ್ಷಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-522735869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.