ಬಸವಾಪಟ್ಟಣ: ‘ಭಾರತ ಸಂಪೂರ್ಣ ಸ್ವಾಸ್ಥ್ಯ ದೇಶವಾಗಬೇಕಾದರೆ ಎಲ್ಲರೂ ಮಾದಕ ವಸ್ತುಗಳಿಂದ ದೂರವಿರಬೇಕು’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಆರ್. ಹಾಲೇಶ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ನಶೆಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮನುಷ್ಯರು ಮದ್ಯ, ತಂಬಾಕು ಹಾಗೂ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಿದ್ದಿದ್ದು, ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಎಎಸ್ಐ ದೇವೇಂದ್ರಪ್ಪ, ಪ್ರಾಂಶುಪಾಲ ಟಿ. ಮಂಜಣ್ಣ, ಪೊಲೀಸ್ ಸಿಬ್ಬಂದಿ ತಿಮ್ಮರಾಜು, ಪ್ರಕಾಶ್ ಮತ್ತು ಸೈಯದ್ ಮಾತನಾಡಿದರು.

ವಿದ್ಯಾರ್ಥಿಗಳಿಂದ ನಶೆಮುಕ್ತ ಭಾರತ ನಿರ್ಮಾಣದ ಬಗ್ಗೆ ಜಾಗೃತಿ ಜಾಥಾ ನಡೆಯಿತು. ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-43-1835135546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.