ಬೇಗೂರು(ಹೊಸಕೋಟೆ): ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಬೇಗೂರಿನಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲೆ ಕಟ್ಟಡ ಸಮುಚ್ಚಯ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಅಂದಾಜು ₹35 ಕೋಟಿ ವೆಚ್ಚದಲ್ಲಿ 10 ಎಕರೆ ಜಾಗದಲ್ಲಿ ಶ್ರಮಿಕ ವಸತಿ ಶಾಲಾ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ಕಟ್ಟಡ ಕಾಮಗಾರಿಯು ಮುಂದಿನ 15 ತಿಂಗಳೊಳಗೆ ಶ್ರಮಿಕರ ಮಕ್ಕಳಿಗೆ ಜ್ಞಾನಾರ್ಜನೆ ನೀಡಲು ತ್ವರಿತವಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ದೇಶದಲ್ಲೇ ಗಿಗ್ ಕಾರ್ಮಿಕರ ರಕ್ಷಣೆಗಾಗಿ ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಕಾನೂನು ಜಾರಿಗೊಳಿಸಿ ಕಾರ್ಮಿಕರ ಕನಿಷ್ಠ ವೇತನವನ್ನು ಶೇ 60ಕ್ಕೆ ಏರಿಕೆ ಮಾಡಿ ಕಾರ್ಮಿಕರಿಗೆ ವೇತನ ಭದ್ರತೆ ಒದಗಿಸಿದೆ ಎಂದರು.

ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಮದುವೆ ಸಹಾಯ ಧನವಾಗಿ ₹60 ಸಾವಿರ, ಅನುಗ್ರಹ ರಾಶಿ ಯೋಜನೆಯಡಿ ಅಂತಿಮ ಸಂಸ್ಕಾರಕ್ಕೆ ₹1.50 ಲಕ್ಷ ಸಹಾಯಧನ, ಸುರಕ್ಷತಾ ಕಿಟ್, ತ್ರಿಚಕ್ರ ವಾಹನ ವಿತರಿಸಲಾಯಿತು.

ಬಮೂಲ್ ನಿರ್ದೇಶಕ ಸತೀಶ್ ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಚ್ಚೆಗೌಡ, ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರಾದ ಶ್ರೀಯಾನ್ಸ್ ಕುಮಾರ್ ಜೈನ್, ಎಚ್.ಜಿ ರಮೇಶ್, ಜಾನಿ ಕೆ.ಪಿ, ಜಯಲಕ್ಷ್ಮೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಮುಕ್ಕುಂದ ಸೇರಿದಂತೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-15-1010651227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.