ಬೆಳಗಾವಿ: ‘ವಿದ್ಯಾರ್ಥಿಗಳು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತವಾಗದೆ, ಕಾಲೇಜು ಆಯೋಜಿಸುವ ವಿವಿಧ ಕಾನೂನು ಚಟುವಟಿಕೆಗಳು, ವಾದ– ವಿವಾದ ಸ್ಪರ್ಧೆಗಳು, ಮೂಟ್ ಕೋರ್ಟ್ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವೃತ್ತಿಪರ ಕೌಶಲ ಬೆಳೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ ನೀಡಿದರು.

ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಎರಡು ದಿನಗಳ ‘ರಾಷ್ಟ್ರೀಯ ಕಾನೂನು ಉತ್ಸವ’ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

‘ಇಂತಹ ಕಾನೂನೋತ್ಸವಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ವಾಕ್ಚಾತುರ್ಯ ಹಾಗೂ ಕಾನೂನು ಜ್ಞಾನವನ್ನು ವೃದ್ಧಿಸಲು ಸಹಕಾರಿಯಾಗುತ್ತವೆ’ ಎಂದು ಹೇಳಿದರು.

‘ನ್ಯಾಯಾಂಗ ವ್ಯವಸ್ಥೆಯ ಸುಸೂತ್ರ ನಿರ್ವಹಣೆಯಲ್ಲಿ ವಕೀಲರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ವಕೀಲ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆಯೊಂದಿಗೆ ನಿಕಟವಾಗಿ ಸಂಬಂಧ ಹೊಂದಿರುವ ಒಂದು ಗೌರವಾನ್ವಿತ ಜವಾಬ್ದಾರಿಯಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

‘ವಿದ್ಯಾರ್ಥಿಗಳು ಪ್ರಾಮಾಣಿಕತೆ, ನೈತಿಕ ಮೌಲ್ಯಗಳು ಮತ್ತು ಮಾನವೀಯತೆ ಎಂಬ ಗುಣಗನ್ನು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾನೂನು ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಕೇವಲ ಜ್ಞಾನ ಸಾಕಾಗುವುದಿಲ್ಲ. ಸಮಾಜದ ಪರ ಕಾಳಜಿ, ನ್ಯಾಯದ ಮೇಲಿನ ನಿಷ್ಠೆ ಹಾಗೂ ಸೇವಾ ಮನೋಭಾವವೂ ಅಗತ್ಯ’ ಎಂದೂ ಅವರು ಹೇಳಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಕಾಲೇಜು ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಆರ್.ಬಿ. ಬೆಲ್ಲದ, ಕೆಎಲ್ಇ ಸಂಸ್ಥೆಯು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ವಿವರಿಸಿ, ‘ವಿದ್ಯಾರ್ಥಿಗಳು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚು ಅಧ್ಯಯನ ಶೀಲರಾಗಬೇಕು. ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಗಳಿಸಬೇಕು’ ಎಂದರು.

ಗೋವಾದ ವಿ.ಎಂ. ಸಲಗಾಂವ್ಕರ್ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಬಾಬಾಗೌಡ ಪಾಟೀಲ ಮಾತನಾಡಿದರು. ಪ್ರಾಂಶುಪಾಲರಾದ ಜ್ಯೋತಿ ಜಿ. ಹಿರೇಮಠ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ಸಂಯೋಜಕರು ಪ್ರೊ.ಸಂತೋಷ ಪಾಟೀಲ ವೇದಿಕೆ ಮೇಲಿದ್ದರು. ಸಾಯಿರಾಜ ವಂದಿಸಿದರು. ಗಾಯತ್ರಿ ನಿರೂಪಿಸಿದರು. ದೇಶದ ವಿವಿಧ ಭಾಗಗಳಿಂದ 16ಕ್ಕೂ ಹೆಚ್ಚು ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-65275759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.