ಬೆಳಗಾವಿ: ನಮ್ಮೂರ ಶಾಲೆ ಮುಚ್ಚಿದರೆ ಬೇರೆ ಊರಿಗೆ ನಮ್ಮ ಮಕ್ಕಳನ್ನು ಕಳಿಸಲು ಸಾಧ್ಯವಿಲ್ಲ. ಯಾವ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಬಾರದು ಎಂಬ ಘೋಷಣೆಗಳೊಂದಿಗೆ ತಾಲ್ಲೂಕಿನ ಹೊನ್ನಿಹಾಳದ ಗ್ರಾಮಸ್ಥರು ಮಂಗಳವಾರ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಭರಮ ಉಚಗಾಂವಕರ್ ಮಾತನಾಡಿ, ‘ಎಐಡಿಎಎಸ್ಒ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು 5 ತಿಂಗಳಿನಿಂದ ಹೋರಾಟ ನಡೆಸಿದ್ದೇವೆ ಎಂದರು.

ಎಐಡಿಎಸ್ಒ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿದರು.

ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈ ಬಿಟ್ಟು ಕೆಪಿಎಸ್ ಯೋಜನೆಯನ್ನು ಹಿಂಪಡೆಯಬೇಕು. ಊರಿನ ಶಾಲೆ ಮುಚ್ಚದಂತೆ ಗ್ರಾಮಸ್ಥರೆಲ್ಲರ ಸಹಿ ಸಂಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.

ಗ್ರಾಮಸ್ಥರಾದ ಶಿವಣ್ಣ, ಯಲ್ಲಪ್ಪ, ಶೇಖವ್ವ, ಭಾಗ್ಯ, ಶುಶಮ್ಮ ಸೇರಿದಂತೆ ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-1711507498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.